ಮೊದಲ ಬಾರಿಗೆ ಅಮೆರಿಕದಲ್ಲಿ ತೃತೀಯ ಲಿಂಗಿಗೆ ಗಲ್ಲು ಶಿಕ್ಷೆ
Team Udayavani, Jan 4, 2023, 6:55 PM IST
ವಾಷಿಂಗ್ಟನ್: ಅಮೆರಿಕದಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿ ಆ್ಯಂಬರ್ ಮೆಕ್ಲಾಗಿನ್ ಎಂಬಾಕೆಗೆ ಮರಣ ದಂಡನೆ ವಿಧಿಸಲಾಗಿದೆ. 2003ರಲ್ಲಿ ಆಕೆಯ ಸ್ನೇಹಿತೆಯನ್ನು ಕೊಲೆ ಮಾಡಿ, ಮೃತದೇಹವನ್ನು ಮಿಸ್ಸಿಸಿಪ್ಪಿ ನದಿಯಲ್ಲಿ ಎಸೆದಿದ್ದಳು ಎಂದು ಆರೋಪಿಲಾಗಿತ್ತು. ಸದರಿ ಪ್ರಕರಣದಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದರು. ವಿಷದ ಇಂಜೆಕ್ಷನ್ ನೀಡುವ ಮೂಲಕ ಮರಣ ದಂಡನೆ ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ ಎಂದು ಮಿಸ್ಸೋರಿ ಪ್ರಾಂತ್ಯದ ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರ ಅಪರಾಧವನ್ನು ಎಸಗಿದ ತೃತೀಯ ಲಿಂಗಿ ಪರ ನ್ಯಾಯವಾದಿ ಮಿಸ್ಸೋರಿ ಪ್ರಾಂತ್ಯದ ಗವರ್ನರ್ ಮೈಕ್ ಪಾರ್ಸನ್ ಅವರಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಮಾಡಬೇಕು ಎಂದು ಕೋರಿಕೆ ಸಲ್ಲಿಸಿದ್ದರೂ, ತಿರಸ್ಕೃತಗೊಂಡಿತ್ತು. ಜತೆಗೆ ಅಮೆರಿಕದ ಸಂಸತ್ ಸದಸ್ಯರಾಗಿರುವ ಕಾರಿ ಬುಷ್ ಮತ್ತು ಇಮ್ಯಾನ್ಯುವೆಲ್ ಕ್ಲೆವರ್ ಕೂಡ ಈ ಬಗ್ಗೆ ಬೇಡಿಕೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.