PM Modi ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ
ಉಕ್ರೇನ್, ಪೋಲೆಂಡ್ ಭೇಟಿಗೆ ಮೆಚ್ಚುಗೆ
Team Udayavani, Sep 23, 2024, 7:20 AM IST
ವಿಲ್ಮಿಂಗ್‌ಟನ್: ಜಗತ್ತಿನಾದ್ಯಂತ ಯುದ್ಧಕ್ಕೆ ಅಂತ್ಯ ಹಾಡಿ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ಶ್ರಮಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಉಕ್ರೇನ್ ಮತ್ತು ಪೋಲೆಂಡ್‌ಗೆ ಭೇಟಿ ನೀಡಿ ಶಾಂತಿ ಮಂತ್ರ ಬೋಧಿಸಿದ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.
ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಡೆಲಾವೆರ್‌ಗೆ ಬಂದಿಳಿಯುತ್ತಿದ್ದಂತೆ ಅವರನ್ನು ಭೇಟಿ ಮಾಡಿದ ಬೈಡೆನ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಜಗತ್ತಿನಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಭಾರತ ಧ್ವನಿ ಎತ್ತುತ್ತಿರುವುದು ಉತ್ತಮ ನಡೆ ಎಂದಿದ್ದಾರೆ.
ಮೋದಿ ಹಾಗೂ ಬೈಡೆನ್ ಮಾತುಕತೆಯ ಬಗ್ಗೆ ವಿವರ ನೀಡಿದ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, “ಬೈಡೆನ್ ಹಾಗೂ ಮೋದಿ ನಡುವೆ ಪ್ರಮುಖ ವಿಷಯಗಳ ಮಾತುಕತೆ ನಡೆದಿದೆ. ಯುದ್ಧ ತಡೆಗಟ್ಟುವ ಬಗ್ಗೆ ಹಲವು ನಾಯಕರ ಜತೆ ಮಾತುಕತೆ ನಡೆಸಲಾಗಿದೆ’ ಎಂದಿದ್ದಾರೆ.
ಮೋದಿ ನಾಯಕತ್ವಕ್ಕೆ ಬಹುಪರಾಕ್
ಈ ನಡುವೆ ಜಿ20, ಗ್ಲೋಬಲ್ ಸೌತ್‌ನಲ್ಲಿ ಮೋದಿ ಅವರ ನಾಯಕತ್ವದ ಬಗ್ಗೆ ಕೂಡ ಬೈಡೆನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋವಿಡ್-19 ಸಹಿತ ಜಗತ್ತು ಎದುರಿಸುತ್ತಿರುವ ಹಲವು ಸವಾಲುಗಳನ್ನು ಸಮರ್ಪಕವಾಗಿ ಎದುರಿಸುವಲ್ಲಿ ಮತ್ತು ಜಾಗತಿಕ ಸಂಘರ್ಷಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಭಾರತದ ಪಾತ್ರದ ಬಗ್ಗೆಯೂ ಶ್ಲಾಘಿಸಿದ್ದಾರೆ. ಪೋಲೆಂಡ್, ಉಕ್ರೇನ್‌ಗೆ ಪ್ರಧಾನಿ ಮೋದಿಯವರ ಐತಿಹಾಸಿಕ ಭೇಟಿಗೂ ಮೆಚ್ಚುಗೆ ಸೂಚಿಸಿದ್ದಾರೆ.
ಮೋದಿ ಹೊಸ ಪ್ರಯತ್ನಕ್ಕೆ ಮೆಚ್ಚುಗೆ
ಅಮೆರಿಕ ಮತ್ತು ಭಾರತದ ನಡುವೆ ಸಹಕಾರವನ್ನು ಬಲಪಡಿಸುವುದಕ್ಕಾಗಿ ಮೋದಿ ಅವರು ಹೊಸ ಕ್ಷೇತ್ರಗಳನ್ನು ಹುಡುಕುತ್ತಿರುತ್ತಾರೆ ಎಂದು ಬೈಡೆನ್ ಹೇಳಿದ್ದಾರೆ. ಭಾರತ ಹಾಗೂ ಅಮೆರಿಕದ ನಡುವಿನ ಸಂಬಂಧ ಹಿಂದೆಂದಿಗಿಂತಲೂ ಈಗ ಹೆಚ್ಚು ಸದೃಢಗೊಂಡಿದೆ. ಪ್ರತಿಬಾರಿಯೂ ಮೋದಿ ಹೊಸ ಕ್ಷೇತ್ರಗಳನ್ನು ಹುಡುಕುತ್ತಾರೆ. ಅದು ಈ ವರ್ಷವೂ ಮುಂದುವರಿದಿದೆ ಎಂದು ಬೈಡೆನ್ ಟ್ವೀಟ್ ಮಾಡಿದ್ದಾರೆ.
ಭಾರತಕ್ಕೆ ಖಾಯಂ ಸ್ಥಾನ
ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ದೊರಕಿಸುವ ಬಗ್ಗೆ ಅಮೆರಿಕ ಬೆಂಬಲ ನೀಡುತ್ತದೆ ಎಂದು ಬೈಡೆನ್ ಘೋಷಿಸಿದ್ದಾರೆ ಎಂದು ಉಭಯ ದೇಶಗಳು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ಉಕ್ರೇನ್ ಮತ್ತು ಪೋಲೆಂಡ್‌ಗಳಿಗೆ ಭೇಟಿ ನೀಡಿ ಮೋದಿ ಶಾಂತಿ ಮಂತ್ರ ಬೋಧಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತ ಕೈಗೊಳ್ಳುತ್ತಿರುವ ಈ ಕಾರ್ಯಕ್ಕೆ ಹೆಚ್ಚಿನ ಬೆಂಬಲ ಸಿಗಬೇಕು ಎಂದು ಅವರು ಹೇಳಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಉಕ್ರೇನ್‌ಗೆ ಭೇಟಿ ನೀಡಿದ್ದ ಮೋದಿ ವೊಲೊಡಿಮಿರ್ ಝೆಲೆನ್‌ಸ್ಕಿಗೆ ಶಾಂತಿ ಪಾಠ ಹೇಳಿದ್ದರು. ಅಲ್ಲದೆ ಪುತಿನ್‌ಗೂ ಇದೇ ಸಲಹೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.