ಅಪ‍್ಗಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವವರ ಸ್ಥಳಾಂತರಕ್ಕೆ ಒತ್ತು : ಹ್ಯಾರೀಸ್
Team Udayavani, Aug 24, 2021, 5:30 PM IST
ವಾಷಿಂಗ್ಟನ್ : ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ನಂತರ ಅಲ್ಲಿನ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಅಫ್ಗಾನಿಸ್ತಾನದಲ್ಲಿ ಉದ್ಯೋಗ ನಿಮಿತ್ತ ವಿದೇಶಗಳಿಂದ ಬಂದು ವಾಸ್ತವ್ಯ ಹೂಡಿದವರ ಸ್ಥಿತಿಯಂತೂ ಹೇಳತೀರದಂತಾಗಿದೆ.
ವಿಶ್ವದ ದೊಡ್ಡಣ್ಣ ಅಮೆರಿಕಾದ ಮೂಲ ವಾಸಿಗಳು ಕೂಡ ತಾಲಿಬಾನ್ ಉಗ್ರರ ಉಪಟಳವನ್ನು ಎದುರಿಸುತ್ತಿದ್ದು, ಹಲವಾರು ಮಂದಿ ಅಮೆರಿಕನ್ನರು ಈಗಾಗಲೇ ಅಮೆರಿಕಾ ಸರ್ಕಾರಕ್ಕೆ ರಕ್ಷಣೆ ಕೋರಿದ್ದಾರೆ. ಈ ಬೆನ್ನಿಗೆ ನಿನ್ನೆ(ಸೊಮವಾರ, ಆಗಸ್ಟ್ 23) ಸ್ವತಃ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಅಫ್ಗಾನಿಸ್ತಾನದಲ್ಲಿರುವ ಮೂಲ ಅಮೆರಿಕನ್ನರನ್ನು ಕರೆಸಿಕೊಳಳ್ಳುವ ಕಾರ್ಯವನ್ನು ಚುರುಕುಗೊಳಿಸುತ್ತೇವೆ ಎಂದಿದ್ದರು.
ಇದನ್ನೂ ಓದಿ : ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಮತ್ತಷ್ಟು ಗಟ್ಟಿಯಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಅಮೆರಿಕವು ತನ್ನ ನಾಗರಿಕರು, ಅಂತರರಾಷ್ಟ್ರೀಯ ಪಾಲುದಾರರು ಮತ್ತು ಅಫ್ಗಾನಿಸ್ತಾನದಲ್ಲಿ ತನಗೆ ನೆರವು ನೀಡಿದವರನ್ನು ಸ್ಥಳಾಂತರಿಸಲು ಒತ್ತು ನೀಡಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಇಂದು(ಮಂಗಳವಾರ, ಆಗಸ್ಟ್ 24) ಹೇಳಿದ್ದಾರೆ.
ಮೂರು ದಿನಗಳ ಸಿಂಗಾಪುರ್ ಪ್ರವಾಸದಲ್ಲಿರುವ ಹ್ಯಾರೀಸ್, ಅಮೆರಿಕದ ನೀತಿ ಮತ್ತು ಪಾಲುದಾರಿಕೆ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಈಗ ಜಗತ್ತಿನ ಬಹುತೇಕರ ಕಣ್ಣುಗಳು ಅಫ್ಗಾನಿಸ್ತಾನದ ಮೇಲೆ ನೆಟ್ಟಿರುವುದರ ಬಗ್ಗೆ ನನಗೆ ಅರಿವಿದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ಉಗ್ರರ ಹಿಂಸಾಚಾರದ ಬಗ್ಗೆ ಮಾಹಿತಿ ಇದೆ. ಈ ನಡುವೆಯೂ ಸಂಕಷ್ಟದಲ್ಲಿರುವವರನ್ನು ಸ್ಥಳಾಂತರ ಮಾಡಲು ನಾವು ಕ್ರಮ ಕೈಗೊಂಡಿದ್ದೇವೆ.
ಇನ್ನು, ಅಮೆರಿಕಾ ಅಫ್ಗಾನಿಸ್ತಾನದಲ್ಲಿ ಸುಮಾರು 20 ವರ್ಷಗಳು ಯುದ್ಧ ನಡೆಸಿದೆ. ನಮ್ಮ ಹಾಗೂ ಮಿತ್ರ ರಾಷ್ಟ್ರಗಳ ಸೇನೆಯ ಅನೇಕ ಸದಸ್ಯರು ಈ ಯುದ್ಧದ ಕಾರಣದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ನೆನಪಿಸಿಕೊಂಡಿದ್ದಾರೆ.
ನಿನ್ನೆ ‘ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನಿಂದ ಅಮೆರಿಕದ ಮತ್ತು ಇತರ ಸಾವಿರಾರು ಜನರನ್ನು ಸ್ಥಳಾಂತರಗೊಳಿಸುವ ಪ್ರಕ್ರಿಯೆಯು ಅತ್ಯಂತ ಕಠಿಣ ಹಾಗೂ ದುಃಖದಾಯಕವಾಗಿದೆ. ಈ ಪ್ರಕ್ರಿಯೆಯನ್ನು ಇನ್ನಷ್ಟು ವೇಗಗೊಳಿಸುತ್ತಿದ್ದೇವೆಂದು ಬೈಡೆನ್ ಹೇಳಿದ್ದರು.
ಇದನ್ನೂ ಓದಿ : ಎಲ್ಐಸಿ ‘ವಿಶೇಷ ನವೀಕರಣ ಅಭಿಯಾನ’ದ ಬಗ್ಗೆ ನಿಮಗೆ ತಿಳಿದಿದೆಯೆ..? ಇಲ್ಲಿದೆ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.