ಇಮ್ರಾನ್ ಖಾನ್ ರಷ್ಯಾ ಭೇಟಿಗೆ ಅಮೆರಿಕ ಅತೃಪ್ತಿ
Team Udayavani, Feb 16, 2022, 7:35 AM IST
ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ಘೋಷಿಸುವ ಸಮಯದಲ್ಲಿ ರಷ್ಯಾದ ಕ್ರೆಮ್ಲಿನ್‌ನಲ್ಲಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭೇಟಿಯಾಗಿರುವುದು ಅಮೆರಿಕದ ಆಕ್ರೋಶಕ್ಕೆ ಕಾರಣವಾಗಿರಬಹುದು ಎಂದು ಪಾಕ್‌ನ ಪ್ರತಿಪಕ್ಷಗಳು ಅಂದಾಜಿಸಿವೆ.
ಇಮ್ರಾನ್ ನಡೆಯನ್ನು ಪ್ರತಿಪಕ್ಷ ನಾಯಕರೂ ಖಂಡಿಸಿದ್ದು, ಇಮ್ರಾನ್‌ಗೆ ಅವರ ಸಲಹೆಗಾರರು ಕೆಟ್ಟ ಸಲಹೆಯನ್ನು ನೀಡಿದ್ದಾರೆ. ಪಾಕಿಸ್ತಾನವು ಈ ಸಂಘರ್ಷದಿಂದ ದೂರ ಉಳಿಯಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಜತೆಗೆ, ಯುದ್ಧದ ಸಂದರ್ಭದಲ್ಲಿ ಪುಟಿನ್ ಜತೆ ಚರ್ಚೆಸಿರುವುದಕ್ಕೆ ಪ್ರತಿಯಾಗಿ ಅಮೆರಿಕವು ಮುಂದಿನ ದಿನಗಳಲ್ಲಿ ಪಾಕಿಸ್ತಾನದ ಮೇಲೆ ಪರೋಕ್ಷ ನಿರ್ಬಂಧಗಳನ್ನು ಹೇರುವ ಸಾಧ್ಯತೆಯಿದೆ ಎಂದೂ ಪ್ರತಿಪಕ್ಷ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :ಶಾಲೆಯಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಕಾರಣ ನಿಗೂಢ
ಅಷ್ಟೇ ಅಲ್ಲ, ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಷನಲ್ ಬ್ಯಾಂಕ್ ಆಫ್ ಪಾಕಿಸ್ತಾನಕ್ಕೆ ಹಣಕಾಸು ಅವ್ಯವಹಾರ ನಿಗ್ರಹ ನಿಯಮಗಳ ಉಲ್ಲಂಘನೆಗಾಗಿ ಗುರುವಾರ ಅಮೆರಿಕದ ಎಫ್ಆರ್‌ಬಿ 55 ದಶಲಕ್ಷ ಡಾಲರ್‌ಗೂ ಅಧಿಕ ದಂಡ ಹಾಕಿರುವುದು ಕೂಡ ಇಮ್ರಾನ್-ಪುಟಿನ್ ಭೇಟಿಯ ಫಲಶ್ರುತಿಯಾಗಿರಬಹುದು ಎಂದೂ ವಿಶ್ಲೇಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.