ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಗೆ ಭಾರತಕ್ಕೆ ರಿಯಾಯಿತಿ?
Team Udayavani, Jul 23, 2018, 10:31 AM IST
ವಾಷಿಂಗ್ಟನ್: ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಗೆ ಅಮೆರಿಕ ಹೇರಿರುವ ನಿರ್ಬಂಧದಿಂದ ಕೆಲವು ದೇಶಗಳಿಗೆ ರಿಯಾಯಿತಿ ನೀಡಬೇಕು ಎಂದು ಅಮೆರಿಕ ರಕ್ಷಣಾ ಸಚಿವ ಜಿಮ್ ಮ್ಯಾಟಿಸ್ ವಾದಿಸಿದ್ದಾರೆ. ಆದರೆ ಹೇಳಿಕೆಯಲ್ಲಿ ಭಾರತವನ್ನು ಮ್ಯಾಟಿಸ್ ಉಲ್ಲೇಖೀಸಿಲ್ಲ. ಈ ಹಿಂದೆ ಹಲವು ಬಾರಿ ಮ್ಯಾಟಿಸ್ ಭಾರತದ ಪರವಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಈ ರಿಯಾಯಿತಿ ಲಭ್ಯವಾಗಲಿದೆ ಎನ್ನಲಾಗಿದೆ.
ರಷ್ಯಾದಿಂದ ಶಸ್ತ್ರಾಸ್ತ್ರಗಳ ಖರೀದಿಸುವ ಪ್ರಕ್ರಿಯೆಯನ್ನು ಕಡಿಮೆ ಮಾಡಿ ಅಮೆರಿಕ ಹಾಗೂ ಇತರ ದೇಶಗಳೊಂದಿಗೆ ಸಂಬಂಧ ಸುಧಾರಿಸಿಕೊಳ್ಳಲು ದೇಶಗಳಿಗೆ ಅವಕಾಶ ನೀಡಬೇಕಿದೆ ಎಂಬ ಕಾರಣಕ್ಕೆ ಮ್ಯಾಟಿಸ್ ಈ ರಿಯಾಯಿತಿ ಪ್ರಸ್ತಾವ ಮಾಡಿದ್ದಾರೆ. ರಷ್ಯಾ ವಿರುದ್ಧ ಕ್ರಮ ಕೈಗೊಳ್ಳಲು ಅಮೆರಿಕ ಈ ನಿರ್ಬಂಧ ಹೇರಿದೆಯಾದರೂ ಇದು ಭಾರತದಂತಹ ದೇಶಗಳ ಮೇಲೆ ಪರಿಣಾಮ ಉಂಟು ಮಾಡಿದೆ. ಇತ್ತೀಚೆಗಷ್ಟೇ ಎಸ್-400 ಟ್ರೂಫ್ ಕ್ಷಿಪಣಿ ಖರೀದಿಸಲು ರಷ್ಯಾ ಜತೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಮೇಲೆ ಈಗ ನಿರ್ಬಂಧದ ತೂಗುಗತ್ತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.