Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
ಶೀಘ್ರ ಆಸ್ಟ್ರೇಲಿಯಾ ಸಂಸತ್ತಿನಲ್ಲಿ ಮಸೂದೆ ಮಂಡನೆ
Team Udayavani, Nov 8, 2024, 7:35 AM IST
ಮೆಲ್ಬೋರ್ನ್: ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಲು ವಯಸ್ಸಿನ ಮಿತಿ ವಿಧಿಸಲು ಆಸ್ಟ್ರೇಲಿಯಾ ಸರ್ಕಾರ ಮುಂದಾಗಿದೆ. ಇದಕ್ಕೆ ಕನಿಷ್ಠ 16 ವರ್ಷದ ವಯೋ ಮಿತಿ ನಿಗದಿಪಡಿಸಿದ್ದು, ಶೀಘ್ರವೇ ಈ ಕುರಿತ ಮಸೂದೆ ಮಂಡಿಸಲಾಗುತ್ತದೆ ಎಂದು ಪ್ರಧಾನಿ ಆ್ಯಂಟೊನಿ ಅಲ್ಬನೀಸ್ ಹೇಳಿದ್ದಾರೆ.
“ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂಬ ಕಾರಣಕ್ಕೆ ನಾವು ಈ ನಿರ್ಧಾರ ಕೈಗೊಂಡಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಬಹಳಷ್ಟು ಮಂದಿ ಪೋಷಕರ ಜತೆ ನಾನು ಮಾತನಾಡಿದ್ದೇನೆ. ಅವರು ಸಹ ನನ್ನಂತೆ ಮಕ್ಕಳ ಬಗ್ಗೆ ಭೀತಿಗೊಳಗಾಗಿದ್ದರು. 16 ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನೋಡಿಕೊಳ್ಳುವುದು ಜಾಲತಾಣಗಳ ಕರ್ತವ್ಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅವು ನಿಯಮಗಳನ್ನು ರೂಪಿಸಬೇಕು. ತಪ್ಪಿದರೆ ದಂಡ ವಿಧಿಸಲಾಗುತ್ತದೆ’ ಎಂದು ಅಲ್ಬನೀಸ್ ಹೇಳಿದ್ದಾರೆ.
ನ.18ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ಈ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಇದಕ್ಕೆ ಅನುಮತಿ ಸಿಕ್ಕರೆ 12 ತಿಂಗಳ ಬಳಿಕ ಇದು ಕಾನೂನಾಗಿ ಜಾರಿಗೆ ಬರಲಿದೆ. ಟಿಕ್‌ಟಾಕ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟ್ವೀಟರ್‌ಗಳಿಗೆ ಈಗಾಗಲೇ ನಿಯಮ ರೂಪಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.