ಆಸ್ಟ್ರೇಲಿಯಾದಲ್ಲಿ ಭಾರೀ ಪ್ರವಾಹ : ಕೊಚ್ಚಿ ಹೋದ ಕಾರು!
Team Udayavani, Mar 25, 2021, 1:26 PM IST
ನವದೆಹಲಿ : ಆಸ್ಟ್ರೇಲಿಯಾದ ಪೂರ್ವ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ ಸ್ಥಿತಿ ಮುಂದುವರಿದಿದ್ದು, 15 ಸಾವಿರಕ್ಕೂ ಅಧಿಕ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ವರದಿಯಾಗಿದೆ. ಇನ್ನು ವಾರ್ಷಿಕವಾಗಿ ಸುರಿಯುವ ಮಳೆಗೆ ಹೋಲಿಸಿದರೆ ಅದರ ಮೂರನೇ ಎರಡರಷ್ಟು ಮಳೆ ಒಂದೇ ವಾರದಲ್ಲೇ ಸುರಿದಿದ್ದು, ಭಾರೀ ಪ್ರವಾಹವಾಗುತ್ತಿದ್ದು ಜನರ ಸ್ಥಿತಿ ಶೋಚನೀಯವಾಗಿದೆ.
ಇದೇ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮ್ಯಾರಿಸನ್ ಟ್ವಿಟ್ಟರ್ ನಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿದ್ದು, ಜನರಿಗೆ ಪ್ರವಾಹದಲ್ಲಿ ಸಿಲುಕದಂತೆ ಎಚ್ಚರಿಸಿದ್ದಾರೆ.
ಪ್ರಧಾನಿ ಶೇರ್ ಮಾಡಿರುವ ವಿಡಿಯೋದಲ್ಲಿ ಕಾರೊಂದು ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದೆ. ಈ ಬಗ್ಗೆ ಬರೆದಿರುವ ಸ್ಟಾಟ್ ಮ್ಯಾರಿಸನ್, ಈದೇ ಕಾರಣದಿಂದ ನೀವು ಪ್ರವಾಹಕ್ಕೆ ಹೋಗಬಾರದು. ವಾಹನಗಳು ಪ್ರವಾಹದಲ್ಲಿ ಸಿಲುಗಿದರೆ ಅವುಗಳನ್ನು ಅಲ್ಲಿಯೇ ಬಿಟ್ಟುಬಿಡಿ. ಅದೃಷ್ಟವಶಾತ್, ಕಾರು ಚಾಲಕನು ಕಾರನ್ನು ಒಯ್ಯುವ ಮೊದಲು ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಇತ್ತೀಚೆಗೆ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪ್ರವಾಹಕ್ಕೆ ಸಿಲುಕಿರುವ ಹಾವು ಮತ್ತು ಜೇಡಗಳು ಕಾಡುಗಳನ್ನು ಬಿಟ್ಟು ಮನೆಗಳಿಗೆ ನುಗ್ಗುತ್ತಿವೆ. ಒಟ್ಟಾರೆಯಾಗಿ ಆಸ್ಟ್ರೇಲಿಯಾ ಸದ್ಯ ಭಾರೀ ಪ್ರವಾಹಕ್ಕೆ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.