ಹಿಂದೂ ಮಹಿಳೆಯ ಮೃತದೇಹಕ್ಕೆಅವಮಾನ, ಆಕ್ರೋಶ
ಪಾಕಿಸ್ತಾನದ ಕಲಾಟ್ ನಗರದಲ್ಲಿ ಹೇಯ ಕೃತ್ಯ
Team Udayavani, Oct 3, 2022, 8:30 PM IST
ಕರಾಚಿ: ಹಿಂದೂ ಮಹಿಳೆಯ ಮೃತದೇಹದ ಅವಶೇಷಗಳನ್ನು ಅಪವಿತ್ರಗೊಳಿಸಿದ ಕೃತ್ಯವನ್ನು ಖಂಡಿಸಿ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕಲಾಟ್ ಪಟ್ಟಣದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು.
“ಇತ್ತೀಚೆಗೆ ಹಿಂದೂ ಸಮುದಾಯದ ಮಹಿಳೆಯೊಬ್ಬರು ಮೃತಪಟ್ಟರು. ಸಂಪ್ರದಾಯದಂತೆ ಆಕೆಯ ಮೃತದೇಹವನ್ನು ಹೂಳಲಾಯಿತು. ಆದರೆ ಕೆಲವು ಕಿಡಿಗೇಡಿಗಳು ಮೃತದೇಹದ ಅವಶೇಷಗಳನ್ನು ಹೊರಗೆ ತೆಗೆದು, ಕೆಲವು ಭಾಗವನ್ನು ಸುಟ್ಟು ಹಾಕಿದ್ದಾರೆ ಮತ್ತು ಉಳಿದ ಭಾಗವನ್ನು ಬಿಸಾಡಿದ್ದಾರೆ,’ ಎಂದು ಸಮುದಾಯದ ಮುಖಂಡರೊಬ್ಬರು ತಿಳಿಸಿದ್ದಾರೆ. “ಈ ಹಿಂದೆ ಸ್ಮಶಾನದ ದ್ವಾರವನ್ನು ಕಳುವು ಮಾಡಲಾಗಿತ್ತು. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ,’ ಎಂದರು.
ಮಹಿಳೆಯ ಮೃತದೇಹವನ್ನು ಅಪವಿತ್ರಗೊಳಿಸಿದ್ದನ್ನು ಖಂಡಿಸಿ ಹಿಂದೂ ಸಮುದಾಯದ ನೂರಾರು ಜನರು ಪ್ರತಿಭಟನೆ ನಡೆಸಿದರು. ಕಿಡಿಗೇಡಿಗಳನ್ನು ಬಂಧಿಸಿ, ಕಾನೂನುರೀತಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಿದರು. ಪಾಕಿಸ್ತಾನದಲ್ಲಿ ಪದೇ ಪದೆ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ, ದಬ್ಟಾಳಿಕೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.