ಪೌರತ್ವ ತಿದ್ದುಪಡಿ ಮಸೂದೆ;ಭಾರತ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ ಬಾಂಗ್ಲಾ ವಿದೇಶಾಂಗ ಸಚಿವ
ಮಸೂದೆ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದರಿಂದ ಭೇಟಿಯನ್ನು ರದ್ದು
Team Udayavani, Dec 12, 2019, 3:27 PM IST
ಢಾಕಾ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಭಾರತದ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ವಿದೇಶಾಂಗ ಸಚಿವಾಲಯಗಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಾಂಗ್ಲಾ ವಿದೇಶಾಂಗ ಸಚಿವ ಎಕೆ ಅಬ್ದುಲ್ ಭಾಗವಹಿಸಬೇಕಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದರಿಂದ ಭೇಟಿಯನ್ನು ರದ್ದುಪಡಿಸಿರುವುದಾಗಿ ವರದಿ ವಿವರಿಸಿದೆ.
ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ ಪ್ರಕಾರ ಬಾಂಗ್ಲಾದೇಶ ಸೇರಿದಂತೆ ನೆರೆಯ ಮೂರು ದೇಶಗಳ ಮುಸ್ಲಿಮೇತರ ವಲಸಿಗ ನಿರಾಶ್ರಿತರಿಗೆ ಭಾರತದ ಕಾಯಂ ಪೌರತ್ವ ನೀಡಲಿದೆ.
ಬಾಂಗ್ಲಾ ವಿದೇಶಾಂಗ ಸಚಿವರ ಭಾರತದ ಭೇಟಿ ಈಗ ರದ್ದುಗೊಳಿಸಲಾಗಿದೆ. ಮುಂದಿನ ಭೇಟಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಬೆಳವಣಿಗೆ ಕುರಿತು ನಿಕಟವರ್ತಿಯೊಬ್ಬರು ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.