Bangladesh; ರಕ್ತ ಕೊಟ್ಟೇವು, ಬಾಂಗ್ಲಾ ಬಿಡೆವು: ಬೀದಿಗಿಳಿದು ಹಿಂದೂಗಳ ಪ್ರತಿಭಟನೆ
ಅಲ್ಪಸಂಖ್ಯಾಕರಿಗೆ ಕಾನೂನಾತ್ಮಕ ರಕ್ಷಣೆ ಒದಗಿಸಲು ಆಗ್ರಹ
Team Udayavani, Aug 11, 2024, 6:45 AM IST
ಢಾಕಾ: “ಈ ದೇಶ ಯಾರಪ್ಪನ ಸ್ವತ್ತೂ ಅಲ್ಲ, ಈ ನಾಡಿಗಾಗಿ ನಾವು ರಕ್ತ ಹರಿಸಿದ್ದೇವೆ. ಅಗತ್ಯ ಬಿದ್ದರೆ ಮತ್ತೆ ದೇಶಕ್ಕಾಗಿ ರಕ್ತ ಚೆಲ್ಲಲು ಸಿದ್ಧರಿದ್ದೇವೆ. ಆದರೆ ಯಾವುದೇ ಕಾರಣಕ್ಕೂ ಬಾಂಗ್ಲಾವನ್ನು ತೊರೆಯುವುದಿಲ್ಲ’ ಹೀಗೆಂದು ಬಾಂಗ್ಲಾದಲ್ಲಿ ಅಲ್ಪಸಂಖ್ಯಾಕ ಹಿಂದೂಗಳು ಘೋಷಣೆ ಕೂಗುತ್ತಾ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರಕಾರ ಪತನವಾಗುತ್ತಿದ್ದಂತೆಯೇ ಹಿಂದೂಗಳ ನಿವಾಸ, ಅಂಗಡಿ, ಉದ್ಯಮಗಳು ಹಾಗೂ ದೇವಾಲಯಗಳನ್ನು ಗುರಿಯಾಗಿಸಿ ಮೂಲಭೂತವಾದಿಗಳು ದಾಳಿ ನಡೆಸಿ ದ್ದರು. ದೇಶಾದ್ಯಂತ 52 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾಕರ ವಿರುದ್ಧ 205ಕ್ಕೂ ಅಧಿಕ ದಾಳಿಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಢಾಕಾದ ಶಹಬಾಗ್‌ನಲ್ಲಿ ಹಿಂದೂ ಸಮುದಾಯಗಳ ಜನರು “ನಾವು ಯಾರು? ಬೆಂಗಾಲಿ-ಬೆಂಗಾಲಿ’, “ಹಿಂದೂಗಳನ್ನು ರಕ್ಷಿಸಿ’ ಎನ್ನುವಂಥ ಬರಹಗಳಿರುವ ಫಲಕಗಳನ್ನು ಹಿಡಿದು, “ಹರೇ ಕೃಷ್ಣ, ಹರೇ ಕೃಷ್ಣ’ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಬೇಡಿಕೆಗಳೇನು:ಅಲ್ಪಸಂಖ್ಯಾಕರ ರಕ್ಷಣೆಗಾಗಿ ಸಮಿತಿ ಹಾಗೂ ಅಲ್ಪಸಂಖ್ಯಾಕರ ಸಚಿವಾಲಯವನ್ನು ರಚಿಸುವಂತೆ ಹಾಗೂ ಅಲ್ಪಸಂಖ್ಯಾಕರ ಮೇಲಾಗುತ್ತಿ ರುವ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿನ ಕಾನೂನು ಕ್ರಮ ರೂಪಿಸುವಂತೆಯೂ ಬೇಡಿಕೆ ಇಟ್ಟಿದ್ದಾರೆ. ಜತೆಗೆ ಸಂಸತ್ತಿನಲ್ಲಿ ಅಲ್ಪಸಂಖ್ಯಾಕರಿಗಾಗಿ ಶೇ.10 ಸ್ಥಾನ ಮೀಸಲು ಇಡಬೇಕು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.