27 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಬಿಲ್ ಗೇಟ್ಸ್- ಮೆಲಿಂಡಾ ಗೇಟ್ಸ್
Team Udayavani, May 4, 2021, 8:57 AM IST
ವಾಷಿಂಗ್ಟನ್: ಶ್ರೀಮಂತ ಉದ್ಯಮಿ, ಸಾಫ್ಟವೇರ್ ದಿಗ್ಗಜ ಬಿಲ್ ಗೇಟ್ಸ್ ಅವರು ಮಿಲಿಂಡಾ ಜೊತೆಗಿನ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ವಿವಾಹ ವಿಚ್ಚೇದನದ ಬಗ್ಗೆ ಸ್ವತಃ ಬಿಲ್ ಗೇಟ್ಸ್ ಅವರೇ ಹೇಳಿಕೊಂಡಿದ್ದಾರೆ.
ಸೋಮವಾರ ಬಿಲ್ ಗೇಟ್ಸ್ ಈ ಬಗ್ಗೆ ಘೋಷಿಸಿಕೊಂಡಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಇಬ್ಬರೂ ಈ ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದಾರೆ.
ಬಿಲ್ ಗೇಟ್ಸ್ ಹಾಗೂ ಅವರ ಪತ್ನಿ ಮಿಲಿಂಡಾ ಗೇಟ್ಸ್ ಸೇರಿ ಸ್ಥಾಪಿಸಿರುವ ಫೌಂಡೇಷನ್ ಮೂಲಕ ವಿಶ್ವದೆಲ್ಲೆಡೆ ಸಾಮಾಜಿಕ ಕಳಕಳಿ ಕಾರ್ಯ ನಡೆಸಲಾಗುತ್ತಿದೆ. ಆರೋಗ್ಯ ವ್ಯವಸ್ಥೆ ಸುಧಾರಣೆಗೂ ಈ ದಂಪತಿ ಫೌಂಡೇಶನ್ ಮೂಲಕ ಅಪಾರ ಮೊತ್ತದ ದಾನ ನೀಡಿದ್ದಾರೆ. ಮುಂದೆಯೂ ಈ ಕಾರ್ಯಗಳು ನಡೆಯುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಪ. ಬಂಗಾಳದ 6 ಜನ ಬಿಜೆಪಿ ಕಾರ್ಯಕರ್ತರ ಸಾವಿಗೆ ಟಿಎಂಸಿ ನೇರ ಕಾರಣ : ಬಿಜೆಪಿ ಆರೋಪ
1994ರಲ್ಲಿ ಹವಾಯಿಯಲ್ಲಿ ಬಿಲ್ ಗೇಟ್ಸ್ ಮತ್ತು ಮಿಲಿಂಡಾ ಗೇಟ್ಸ್ ವಿವಾಹವಾಗಿದ್ದರು. ದಂಪತಿಗೆ ಮೂರು ಮಕ್ಕಳಿದ್ದಾರೆ.
ಶ್ರೀಮಂತ ದಂಪತಿಗಳ ವಿಚ್ಚೇದನವಾದಾಗ ಪರಿಹಾರ ಹಣದ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಬಿಲ್ ಗೇಟ್ಸ್ ಮತ್ತು ಮಿಲಿಂಡಾ ತಮ್ಮ ಹೇಳಿಕೆಯಲ್ಲಿ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.