ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
ವಾಷಿಂಗ್ಟನ್‌ನಲ್ಲಿ 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Team Udayavani, Nov 20, 2024, 9:13 PM IST
ನ್ಯೂಯಾರ್ಕ್: ಪೆಸಿಫಿಕ್ ಸಾಗರದಲ್ಲಿ ನಿರ್ಮಾಣವಾಗಿದ್ದ “ಬಾಂಬ್ ಸೈಕ್ಲೋನ್’ ಬುಧವಾರ ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದೆ. ಭಾರಿ ಗಾಳಿ ಹಾಗೂ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ವಾಷಿಂಗ್ಟನ್ ಪ್ರಾಂತ್ಯ ಬಹುತೇಕ ಮುಳುಗಡೆಯಾಗಿದ್ದು, ಬರೋಬ್ಬರಿ 6 ಲಕ್ಷ ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡಿವೆ. ಮನೆಯ ಮೇಲೆ ಮರ ಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇಡೀ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಒರೆಂಗಾವ್‌ನಲ್ಲಿ 15,000 ಮಂದಿ ಹಾಗೂ ಕ್ಯಾಲಿಫೋರ್ನಿಯಾದಲ್ಲಿ 19,000 ಮಂದಿ ಸಂಕಷ್ಟಕ್ಕೀಡಾಗಿದ್ದಾರೆ.
163 ಕಿ.ಮೀ. ವೇಗದ ಗಾಳಿ:
ಅಮೆರಿಕದ ಪಶ್ಚಿಮ ತೀರದುದ್ದಕ್ಕೂ ಬರೋಬ್ಬರಿ 163 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಕೇವಲ ಗಾಳಿ, ಮಳೆಯಷ್ಟೇ ಅಲ್ಲದೇ ಕ್ಯಾಲಿಫೋರ್ನಿಯಾದಲ್ಲಿ 8 ಇಂಚು ಗಾತ್ರದ ಹಿಮ ಸುರಿದಿದ್ದು, ಸಾಮಾನ್ಯರ ಜೀವನ ಸಂಕಷ್ಟಕ್ಕೀಡಾಗಿದೆ.
ಪಶ್ಚಿಮ ಕರಾವಳಿಯಲ್ಲಿರುವ ಎಲ್ಲಾ ನಗರಗಳಿಗೂ ಮುನ್ನೆಚ್ಚರಿಕೆ ನೀಡಲಾಗಿದ್ದು, ಪ್ರವಾಹ ಪರಿಸ್ಥಿತಿ ತಗ್ಗಿದ ಕೂಡಲೇ ಸಾಧ್ಯವಾದಷ್ಟು ಬೇಗ ಎಲ್ಲಾ ಸೌಲಭ್ಯಗಳನ್ನು ಮರುಸ್ಥಾಪಿಸುವುದಾಗಿ ಅಲ್ಲಿನ ಆಡಳಿತ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.