Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Team Udayavani, May 4, 2024, 8:38 AM IST
ಒಟ್ಟಾವ: ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಿಟ್ ಸ್ಕ್ವಾಡ್‌ನ ಸದಸ್ಯರು ಎಂದು ಶಂಕಿಸಲಾಗಿರುವ ಮೂವರು ಭಾರತೀಯರನ್ನು ಬಂಧಿಸಿರುವುದಾಗಿ ಕೆನಡಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಹರ್ದೀಪ್ ಸಿಂಗ್ ನಿಜ್ಜಾರ್ ನನ್ನು 2023ರ ಜೂನ್ 18 ರಂದು ಕೆನಡಾದಲ್ಲಿ ಹತ್ಯೆ ಮಾಡಲಾಗಿತ್ತು ಅಲ್ಲದೆ ಈ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪವನ್ನು ಮಾಡಿದ್ದರು ಇದರ ನಂತರ ಈ ವಿಚಾರ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಗದ್ದಲದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಅಷ್ಟು ಮಾತ್ರವಲ್ಲದೆ ಕೆನಡಾ ಆರೋಪವನ್ನು ಭಾರತ ಅಸಂಬದ್ಧ, ಅಪ್ರಚೋದಿತ ಎಂದು ತಳ್ಳಿ ಹಾಕಿದೆ ಜೊತೆಗೆ ಭಾರತವೇ ನಿಜ್ಜರ್ ಹತ್ಯೆ ಮಾಡಿರುವುದೆಂದು ನಿಖರವಾದ ಸಾಕ್ಷಿ ನೀಡಿ ಎಂದು ಕೆನಡಾಕ್ಕೆ ಭಾರತ ಪ್ರಶ್ನೆ ಮಾಡಿದೆ.
ಬಂಧಿತ ಮೂವರು ಭಾರತೀಯರನ್ನು ಕರಣ್ ಬ್ರಾರ್ (22), ಕಮಲ್‌ಪ್ರೀತ್ ಸಿಂಗ್ (22) ಹಾಗೂ ಕರಣ್‌ಪ್ರೀತ್ ಸಿಂಗ್ (28) ಎಂದು ಹೇಳಲಾಗಿದ್ದು ಈ ಮೂವರು ಕೆನಡಾದ ಆಲ್ಬರ್ಟಾದಲ್ಲಿ ಐದು ವರ್ಷಗಳಿಂದ ವಾಸಿಸುತ್ತಿದ್ದಾರೆ ಎಂದು ಸೂಪರಿಂಟೆಂಡೆಂಟ್ ಮಂದೀಪ್ ಮೂಕರ್ ಹೇಳಿದ್ದಾರೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಪ್ರತ್ಯೇಕ ತನಿಖೆ ನಡೆಸಿ ವಶಕ್ಕೆ ಪಡೆದಿರುವ ಮೂವರು ಸೇರಿದಂತೆ ಭಾರತದ ಪಾತ್ರವಿರುವ ಕುರುತು ಸಮಗ್ರ ತನಿಖೆ ನಡೆಸಲಾಗುವುದೆಂದು ಪೊಲೀಸ್ ಸಹಾಯಕ ಆಯುಕ್ತ ಡೇವಿಡ್ ಟೆಬೋಲ್ ತಿಳಿಸಿದ್ದಾರೆ.
ಇದನ್ನೂ ಓದಿ: Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.