“ಚೀನ ಅಧಿಕಾರಿಗಳನ್ನು ಹೊರದಬ್ಬುತ್ತೇವೆ’
Team Udayavani, May 6, 2023, 8:10 AM IST
ಟೊರಂಟೊ: ಕೆನಡಾ ಸಂಸದ ಮೈಕೇಲ್ ಚಾಂಗ್ ಅವರ ಹಾಂಕಾಂಗ್ ಸಂಬಂಧಿಕರಿಗೆ ಚೀನದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಬೆದರಿಕೆ ಹಾಕಿದ್ದಾರೆ.
ಹೀಗೊಂದು ಗುಪ್ತಚರ ಇಲಾಖೆ ಮಾಹಿತಿ ಕೆನಡಾ ಸರಕಾರಕ್ಕೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಚೀನ ರಾಜತಾಂತ್ರಿಕರನ್ನು ದೇಶದಿಂದ ಹೊರಕ್ಕೆ ಹಾಕಲು ಚಿಂತಿಸಲಾಗುತ್ತಿದೆ ಎಂದು ಕೆನಡಾ ವಿದೇಶಾಂಗ ಸಚಿವ ಮೆಲಾನಿ ಜಾಲಿ ಹೇಳಿದ್ದಾರೆ.
ಈ ಬಗ್ಗೆ ಚೀನ ರಾಯಭಾರಿಗೂ ಸಮನ್ಸ್ ನೀಡಿ, ಇಂತಹ ವರ್ತನೆಗಳನ್ನು ಕೆನಡಾ ಸಹಿಸುವುದಿಲ್ಲ ಎಂದು ಹೇಳಲಾಗಿದೆ. ಬೀಜಿಂಗ್ ಮಾನವ ಹಕ್ಕು ಗಳನ್ನು ದಮನ ಮಾಡುತ್ತಿದೆ ಎಂದು ಕೆನಡಾ ವಿಪಕ್ಷ ಕನ್ಸರ್ವೇಟಿವ್ನ ಸಂಸದ ಮೈಕೇಲ್ ಚಾಂಗ್ ಟೀಕಿಸಿದ್ದರು. ಅದಾದ ಮೇಲೆ ಚಾಂಗ್ ಮತ್ತು ಅವರ ಹಾಂಕಾಂಗ್ ಸಂಬಂಧಿಕರನ್ನು ಗುರಿ ಮಾಡಿಕೊಳ್ಳಲಾಗಿತ್ತು. ಇದನ್ನು ಕೆನಡಾ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಾಲಿ, ನಾವು ವಿವಿಧ ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಅದರಲ್ಲಿ ಚೀನ ರಾಜತಾಂತ್ರಿಕರನ್ನು ದೇಶದಿಂದ ಹೊರಹಾಕುವುದೂ ಒಂದು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚೀನ ರಾಯಭಾರಿ ಕಾಂಗ್ ಪೆಲು, ತಮ್ಮ ರಾಜತಾಂತ್ರಿಕರನ್ನು ಹೊರಹಾಕುವುದರ ವಿರುದ್ಧ ಕೆನಡಾಕ್ಕೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.