ಪಾಕ್ ಉಗ್ರ ಅಜರ್ ಮಸೂದ್: ಭಾರತಕ್ಕೆ ಅಡ್ಡಗಾಲು ಸಮರ್ಥಿಸಿಕೊಂಡ ಚೀನ
Team Udayavani, Sep 29, 2018, 5:31 PM IST
ವಾಷಿಂಗ್ಟನ್ : ಪಾಕಿಸ್ಥಾನದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥನಾಗಿರುವ ಅಜರ್ ಮಸೂದ್‌ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆಯು ಘೋಷಿಸುವ ಭಾರತದ ನಿರಂತರ ಯತ್ನಕ್ಕೆ ತಾನು ಒಡ್ಡಿರುವ ತಡೆಯನ್ನು ಚೀನ ಸಮರ್ಥಿಸಿಕೊಂಡಿದೆ.
“ಅಜರ್ ಮಸೂದ್ ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ದಿಶೆಯಲ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರಲ್ಲಿ ಒಮ್ಮತವಿಲ್ಲ; ಮೇಲಾಗಿ ಈತನ ವಿಷಯದಲ್ಲಿ ನೇರ ಕಕ್ಷಿದಾರರಾಗಿರುವ ಭಾರತ ಮತ್ತು ಪಾಕಿಸ್ಥಾನದಲ್ಲೂ ಈ ಬಗ್ಗೆ ಒಮ್ಮತವಿಲ್ಲ’ ಎಂದು ಹೇಳುವ ಮೂಲಕ ಚೀನದ ವಿದೇಶ ಸಚಿವ ವಾಂಗ್ ಯೀ ಅವರು ಚೀನದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
2016ರಲ್ಲಿ 17 ಭದ್ರತಾ ಸಿಬಂದಿಗಳನ್ನು ಬಲಿ ಪಡೆದ ಕಾಶ್ಮೀರದಲ್ಲಿನ ಉರಿ ಸೇನಾ ನೆಲೆಯ ಮೇಲಿನ ದಾಳಿಯ ಸಹಿತ ಭಾರತದಲ್ಲಿ ಹಲವು ಉಗ್ರ ದಾಳಿಗಳನ್ನು ನಡೆಸಿದ ಆರೋಪ ಜೆಇಎಂ ವಿರುದ್ಧ ಇದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ವಿಟೋ ಅಸ್ತ್ರ ಪ್ರಯೋಗಿಸುವ ಖಾಯಂ ಸದಸ್ಯ ಚೀನ, ಭಾರತದ ಯತ್ನಕ್ಕೆ ತಡೆ ಒಡ್ಡುವಲ್ಲಿ ಅಮೆರಿಕ, ಬ್ರಿಟನ್ ಮತ್ತು ಫ್ರಾನ್ಸ್ ನ ಬೆಂಬಲ ಪಡೆದಿದೆ. ಅಲ್ ಕಾಯಿದಾ ನಿಷೇಧ ಸಮಿತಿಯಡಿ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆಯು ಜಾಗತಿಕ ಉಗ್ರನೆಂದು ಘೋಷಿಸುವಂತೆ ಮಾಡುವ ಭಾರತದ ಪ್ರಯತ್ನ ಚೀನದ ನಿರಂತರ ತಡೆಯಿಂದಾಗಿ ಈ ತನಕವೂ ಸಫಲವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.