ಚೀನಾದಲ್ಲಿ ತೀವ್ರಗೊಂಡ ಡೆಲ್ಟಾ ಕಾಟ
Team Udayavani, Nov 16, 2021, 5:40 AM IST
ಬೀಜಿಂಗ್: ಕೊರೊನಾ ಮೂಲಸ್ಥಾನ ಚೀನಾದಲ್ಲಿ ಇದೀಗ ಡೆಲ್ಟಾ ರೂಪಾಂತರ ದಿನದಿಂದ ದಿನಕ್ಕೆ ಏರಿಕೆ ಕಾಣಲಾರಂಭಿಸಿದೆ. ಅ.17ರಿಂದ ನ.14ರವರೆಗೆ ದೇಶದಲ್ಲಿ 1,308 ಜನರಲ್ಲಿ ಡೆಲ್ಟಾ ರೂಪಾಂತರ ದೃಢಪಟ್ಟಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಡೆಲ್ಟಾ ರೂಪಾಂತರಿ ಈ ಪ್ರಮಾಣದಲ್ಲಿ ಏರಿಕೆಯಾಗಿದೆ.
21 ಪ್ರಾಂತ್ಯಗಳಲ್ಲಿ ಡೆಲ್ಟಾ ರೂಪಾಂತರಿ ಪತ್ತೆಯಾಗಿದ್ದು, ಡಲಿಯಾನ್ ನಗರದಲ್ಲಂತೂ ಸೋಂಕಿನ ಹರಡುವಿಕೆ ಪ್ರಮಾಣ ಅತ್ಯಂತ ಅಧಿಕವಿದೆ. 75 ಲಕ್ಷ ಜನಸಂಖ್ಯೆಯಿರುವ ಈ ನಗರದಲ್ಲಿ ನ.4ರಂದು ಮೊದಲ ಡೆಲ್ಟಾ ಪ್ರಕರಣ ದೃಢವಾಗಿತ್ತು. ಅದಾದ ನಂತರ ಪ್ರತಿದಿನ ಸರಾಸರಿ 24 ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ದೇಶಾದ್ಯಂತ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸಕಲ ಪ್ರಯತ್ನಗಳನ್ನು ಮಾಡಲಾರಂಭಿಸಿದೆ.
ಇದನ್ನೂ ಓದಿ:ಆದಿವಾಸಿಗಳ ನಿರ್ಲಕ್ಷಿಸಿದ್ದ ಕಾಂಗ್ರೆಸ್: ಪ್ರಧಾನಿ ಮೋದಿ ಆರೋಪ
ಒಂದೇ ವಿವಿಯ 1500 ವಿದ್ಯಾರ್ಥಿಗಳು ಕ್ವಾರಂಟೈನ್:
ಡಲಿಯಾನ್‌ನ ಪ್ರಸಿದ್ಧ ಜುವಾಂಗ್ ವಿಶ್ವವಿದ್ಯಾಲಯದಲ್ಲಿ ಡೆಲ್ಟಾ ಆರ್ಭ ಟ ಹೆಚ್ಚಿದ್ದು, 1500ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ವಿವಿಧ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಅಲ್ಲಿಂದಲೇ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.