ಸಾಗರದಡಿಯಲ್ಲಿ ಚೀನಾ ಗುಪ್ತ ಕಾರ್ಯಚರಣೆ ಪತ್ತೆ: ಜಪಾನ್
ತನ್ನ ದ್ವೀಪದ ಬಳಿ ಡ್ರ್ಯಾಗನ್ ಸಬ್‌ಮೆರೀನ್ ಬಂದ ಬಗ್ಗೆ ಜಪಾನ್ ಆರೋಪ
Team Udayavani, Sep 12, 2021, 10:00 PM IST
ಜಪಾನ್: ಪೂರ್ವ ಚೀನಾ ಸಮುದ್ರದಲ್ಲಿರುವ ಜಪಾನ್‌ಗೆ ಸೇರಿದ ದ್ವೀಪವೊಂದರ ಬಳಿ ಚೀನಾದ ಜಲಾಂತರ್ಗಾಮಿಯೊಂದು ಗುಪ್ತವಾಗಿ ಹರಿದಾಡುತ್ತಿರುವುದನ್ನು ತಾನು ಪತ್ತೆ ಮಾಡಿರುವುದಾಗಿ ಜಪಾನ್ ಸರ್ಕಾರ ತಿಳಿಸಿದೆ.
“ಸಮುದ್ರದೊಳಗೆ ಗುಪ್ತವಾಗಿ ಚಲಿಸುತ್ತಾ ಜಪಾನ್‌ನ ದ್ವೀಪದ ಹತ್ತಿರಕ್ಕೆ ಆಗಮಿಸಿದ್ದ ಚೀನಾದ ಜಲಾಂತರ್ಗಾಮಿ ನೌಕೆ, ಆನಂತರ ಪಶ್ಚಿಮದ ಕಡೆಗೆ ಪ್ರಯಾಣ ಬೆಳೆಸಿದೆ. ಇದು ದಕ್ಷಿಣ ಚೀನಾ ಸಮುದ್ರದಲ್ಲಿ ಹಾಗೂ ಪೂರ್ವ ಚೀನಾ ಸಮುದ್ರದಲ್ಲಿ ಚೀನಾ ಗುಪ್ತವಾಗಿ ನಡೆಸುತ್ತಿರುವ ಸೇನಾ ಕಾರ್ಯಾಚರಣೆಗಳಿಗೆ ಪೂರಕವಾಗ ಸಾಕ್ಷ್ಯವನ್ನು ಒದಗಿಸುತ್ತಿದೆ’ ಎಂದು ಜಪಾನ್ ತಿಳಿಸಿದೆ.
ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಮಾಡುತ್ತಿರುವ ಪ್ರಯತ್ನವನ್ನು ಭಾರತ ಸೇರಿದಂತೆ ಹಲವಾರು ದೇಶಗಳು ವಿರೋಧಿಸುತ್ತಿರುವ ಬೆನ್ನಲ್ಲೇ ಜಪಾನ್ ನೀಡಿರುವ ಈ ಮಾಹಿತಿ ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ:ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್ ಪಾಟೀಲ್ ಹೇಳಿಕೆ ಸಾಕ್ಷಿ: ದಿನೇಶ್
ಚೀನಾಕ್ಕೆ ಜಪಾನ್-ವಿಯೆಟ್ನಾಂ ಸೆಡ್ಡು
ಈ ನಡುವೆ, ಚೀನಾಕ್ಕೆ ತೀವ್ರ ಆತಂಕ ಸೃಷ್ಟಿಸಿದ್ದ ಜಪಾನ್-ವಿಯೆಟ್ನಾಂ ನಡುವಿನ ಸೇನಾ ಸಹಕಾರ ಒಪ್ಪಂದಕ್ಕೆ ಆ ಎರಡೂ ದೇಶಗಳು ಸಹಿ ಹಾಕಿವೆ. ಈ ಒಪ್ಪಂದದ ಅಡಿಯಲ್ಲಿ, ಉಭಯ ದೇಶಗಳ ನಡುವೆ ಯುದ್ಧ ಸಲಕರಣೆಗಳು ಹಾಗೂ ತಂತ್ರಜ್ಞಾನಗಳ ವಿನಿಯಮ, ಜಂಟಿ ಸೇನಾ ಕವಾಯತು, ತುರ್ತು ಸಂದರ್ಭಗಳಲ್ಲಿ ಸೇನಾ ಸಹಕಾರ ಲಭ್ಯವಾಗಲಿದೆ. ಈ ಮೂಲಕ, ಚೀನಾ ಪ್ರಾಬಲ್ಯವನ್ನು ಮೂಲೆಗುಂಪು ಮಾಡುವ ಭಾರತ ಮತ್ತು ಜಗತ್ತಿನ ನಾನಾ ದೇಶಗಳ ಪ್ರಯತ್ನಕ್ಕೆ ಜಪಾನ್ ಹಾಗೂ ವಿಯೆಟ್ನಾಂ ಕೂಡ ಕೈ ಜೋಡಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.