ದ. ಚೀನ ಸಮುದ್ರದಲ್ಲಿ ಚೀನದಿಂದ 20 ತೇಲುವ ಅಣು ವಿದ್ಯುತ್ ಸ್ಥಾವರ
Team Udayavani, Feb 14, 2017, 4:26 PM IST
ಬೀಜಿಂಗ್: ದಕ್ಷಿಣ ಚೀನ ಸಮುದ್ರದ ಒಡೆತನ ಕುರಿತಾದ ಜಾಗತಿಕ ವಿವಾದವನ್ನು ಇನ್ನಷ್ಟು ತೀವ್ರಗೊಳಿಸುವ ವಿದ್ಯಮಾನವಾಗಿ ಚೀನ, ತನ್ನ ದಕ್ಷಿಣ ಸಮುದ್ರದಲ್ಲಿ ಸುಮಾರು 20 ತೇಲುವ ಅಣು ವಿದ್ಯುತ್ ಸ್ಥಾವರಗಳನ್ನು ಅಭಿವೃದ್ಧಿಪಡಿಸುವ ಮಹತ್ತರ ಯೋಜನೆಯನ್ನು ಪ್ರಕಟಿಸಿದೆ.
ಸಾಗರೋತ್ತರ ಯೋಜನೆಗಳಿಗೆ ಹಾಗೂ ಸಾಗರದಾಳದಲ್ಲಿನ ಅನಿಲ ನಿಕ್ಷೇಪಗಳನ್ನು ಶೋಧಿಸುವುದಕ್ಕೆ ಸ್ಥಿರವಾದ ವಿದ್ಯುತ್ ಪೂರೈಕೆ ಅಗತ್ಯವಿರುವುದರಿಂದ ತಾನು ದಕ್ಷಿಣ ಸಮುದ್ರದಲ್ಲಿ ತೇಲುವ ಅಣು ವಿದ್ಯುತ್ ಸ್ಥಾವರಗಳನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವುದಾಗಿ ಚೀನ ಹೇಳಿದೆ.
ಚೀನ ತನ್ನ ಈ ತೇಲುವ ಅಣು ವಿದ್ಯುತ್ ಸ್ಥಾವರ ನಿರ್ಮಾಣವನ್ನು ಪಂಚ ವಾರ್ಷಿಕ ಅಭಿವೃದ್ಧಿ ಯೋಜನೆಯ ಅಂಗವನ್ನಾಗಿ ಮಾಡಿದೆ. ಹಾಗಿದ್ದರೂ ಚೀನೀ ಅಧಿಕಾರಿಗಳು ಈಗಾಗಲೇ ಈ ಪ್ರಸ್ತಾವಿತ ಸಾಗರಿಕ ಅಣುವಿದ್ಯುತ್ ಸ್ಥಾವರಗಳ ಏಕರೂಪತೆ ಮತ್ತು ಅವುಗಳಿಗೆ ಸಂಬಂಧಿಸಿದ ಮುಖ್ಯ ತಾಂತ್ರಿಕತೆಯನ್ನು ಅಭಿವೃದ್ಧಿ ಪಡಿಸುವ ಸಂಶೋಧನ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಚೀನದ ರಾಷ್ಟ್ರೀಯ ಪರಮಾಣು ನಿಗಮವು ದಕ್ಷಿಣ ಚೀನ ಸಮುದ್ರದಲ್ಲಿ ಸುಮಾರು 20 ತೇಲುವ ಅಣು ವಿದ್ಯುತ್ ಸ್ಥಾವರಗಳನ್ನು ಅಭಿವೃದ್ಧಿಪಡಿಸಲು ಮತ್ತು ಅವುಗಳನ್ನು 2019ರೊಳಗಾಗಿ ಕಾರ್ಯೋನ್ಮುಖಗೊಳಿಸಲು ಉದ್ದೇಶಿಸಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.