ಕೋವಿಡ್ ನಾಲ್ಕನೇ ಅಲೆ : ನೈರುತ್ಯ ಚೀನಾ ಸಂಪೂರ್ಣ ಲಾಕ್ ಡೌನ್
Team Udayavani, Jul 7, 2021, 5:29 PM IST
ಯುನ್ನಾನ್ : ಮ್ಯಾನ್ಮಾರ್ ನೊಂದಿಗೆ ಗಡಿಯನ್ನು ಹಂಚಿಕೊಂಡಿರುವ ನೈರುತ್ಯ ಚೀನಾವು ಕೋವಿಡ್ ಸೋಂಕಿನ ನಾಲ್ಕನೇ ಅಲೆಯ ಕಾರಣದಿಂದಾಗಿ ಇಂದು (ಬುಧವಾರ, ಜುಲೈ 7) ಸಂಪೂರ್ಣ ಲಾಕ್ ಡೌನ್ ಗೆ ಮೊರೆ ಹೋಗಿದೆ.
ಯುನ್ನಾನ್ ಪ್ರಾಂತ್ಯದ ರುಯಿಲಿ ನಗರದಲ್ಲಿ ಕೆಲವು ಅಗತ್ಯ ವಸ್ತುಗಳ ಮಾರುಕಟ್ಟೆಗಳು, ಆಸ್ಪತ್ರೆಗಳು, ಔಷಧಾಲಯಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನು ಮುಚ್ಚಲಾಗಿದೆ. ಸೊಂಕು ಇಳಿಮುಖವಾಗುವ ತನಕ ಹೋಮ್ ಕ್ವಾರಂಟೈನ್ ಕಡ್ಡಾಯ ಎಂದು ಅಲ್ಲಿನ ಸರ್ಕಾರ ಆದೇಶಿಸಿರುವುದಾಗಿ ಅಲ್ಲಿನ ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿ ಮಾಡಿದೆ.
ಇದನ್ನೂ ಓದಿ : ಕೋವಿಡ್ ಸೋಂಕು ಹೆಚ್ಚಳ: ಮಹಾರಾಷ್ಟ್ರ ಸತಾರಾ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್
ಕಳೆದ ಎರಡು ಮೂರು ದಿನಗಳಿಂದ ಸ್ಥಳೀಯವಾಗಿ ನಾಲ್ಕನೇ ಅಲೆಯ ಕಾರಣದಿಂದಾಗಿ ಸೋಂಕುಗಳು ನಿರಂತರವಾಗಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದೆ.
ಕಳೆದ ರಾತ್ರಿ (ಮಂಗಳವಾರ, ಜುಲೈ 6) 15 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರವು ರುಯಿಲಿ ಪ್ರಾಂತ್ಯಗಳಲ್ಲಿ ಪತ್ತೆಯಾಗಿದ್ದು,
ಚೀನಾ ಮತ್ತು ಮ್ಯಾನ್ಮಾರ್ ನ ನಿವಾಸಿಗಳ ನಡುವಿನ ವ್ಯಾಪಾರ ವಹಿವಾಟುಗಳು ಹಾಗೂ ವಸ್ತುಗಳ ವಿನಿಮಯ, ಸಂಚಾರ ಕೂಡ ಆಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಕಾಣಿಸಿಕೊಳ್ಳುವುದಕ್ಕೆ ಕಾರಣವಾಗಿದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
ಇದನ್ನೂ ಓದಿ : ಸಂಪುಟ ಸರ್ಜರಿ : ರಮೇಶ ಪೊಕ್ರಿಯಾಲ್, ಸದಾನಂದ ಗೌಡ ಸೇರಿ 12 ಮಂದಿ ರಾಜಿನಾಮೆ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.