ಪಾಕ್, ಲಂಕಾಗೆ ಚೀನ ಸಾಲ ಕಳವಳಕಾರಿ: ಅಮೆರಿಕ
Team Udayavani, Feb 26, 2023, 7:35 AM IST
ವಾಷಿಂಗ್ಟನ್: “ಭಾರತದ ನೆರೆರಾಷ್ಟ್ರಗಳಾದ ಪಾಕಿಸ್ತಾನ, ನೇಪಾಳ ಮತ್ತು ಶ್ರೀಲಂಕಾಗೆ ಚೀನಾವು ಭಾರೀ ಪ್ರಮಾಣದಲ್ಲಿ ಸಾಲ ನೀಡಿರುವುದು ಅತ್ಯಂತ ಕಳವಳ ಮೂಡಿಸಿದೆ.
“ಸಾಲ’ದ ಹೆಸರಲ್ಲಿ ಈ ಮೂರೂ ದೇಶಗಳನ್ನು ತನ್ನ ಹತೋಟಿಯಲ್ಲಿಡಲು ಚೀನಾ ತಂತ್ರಗಾರಿಕೆ ಮಾಡಿರುವ ಸಾಧ್ಯತೆಯಿದ್ದು, ಈ ಕುರಿತು ಭಾರತದೊಂದಿಗೆ ಮಾತುಕತೆ ನಡೆಸಲಿದ್ದೇವೆ’ ಎಂದು ಅಮೆರಿಕ ಹೇಳಿದೆ.
ಮಾ.1ರಿಂದ 3 ದಿನಗಳ ಕಾಲ ಅಮೆರಿಕ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಶನಿವಾರ ಮಾತನಾಡಿದ ಅಮೆರಿಕದ ರಾಜತಾಂತ್ರಿಕ ಅಧಿಕಾರಿ ಡೊನಾಲ್ಡ್ ಲು, “ಚೀನಾ ಸೇರಿದಂತೆ ಇತರೆ ಯಾವುದೇ ರಾಷ್ಟ್ರಗಳ ಒತ್ತಡಕ್ಕೆ ಮಣಿಯದೇ, ಸ್ವಂತ ನಿರ್ಧಾರ ಕೈಗೊಳ್ಳುವಂತೆ ಭಾರತವೂ ಸೇರಿ ನೆರೆಯ ಎಲ್ಲ ದೇಶಗಳಿಗೂ ನಾವು ಸಲಹೆ ನೀಡಲಿದ್ದೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.