ಕೊಲಂಬೋ ಸ್ಫೋಟ ; ನಟಿ ಸಂಜನಾ ಗರ್ಲಾನಿ ಸಹೋದರ ಪಾರು
Team Udayavani, Apr 21, 2019, 3:18 PM IST
ಕೊಲಂಬೋ: ಕೊಲಂಬೋದ ಹೊಟೇಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸ್ಯಾಂಡಲ್‌ವುಡ್ ನಟಿ ಸಂಜನಾ ಗರ್ಲಾನಿ ಸಹೋದರ ರಾಹುಲ್ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ರಾಹುಲ್ ಅವರು ತಂಗಿದ್ದ ಕಿಂಗ್ಸ್‌ಬ್ಯುರಿ ಹೊಟೇಲ್ ಕೊಠಡಿಯ ಪಕ್ಕದಲ್ಲೇ ನ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಹುಲ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಈಸ್ಟರ್ ಆಚರಣೆಯ ವೇಳೆ ಶ್ರೀಲಂಕಾ ರಾಜಧಾನಿ ಕೊಲಂಬೋ ಸೇರಿ ಮೂರು ನಗರಗಳಲ್ಲಿ ಉಗ್ರರು ಸರಣಿ ಸ್ಫೋಟಗಳನ್ನು ನಡೆಸಿದ್ದು, ಭಾರೀ ದಾಳಿಗೆ ವಿದೇಶಿಗರು ಸೇರಿ 129 ಮಂದಿ ಪ್ರಾಣ ಕಳೆದುಕೊಂಡಿದ್ದು , 300 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸರಣಿ ದಾಳಿಯಿಂದ ಇಡೀ ದೇಶವೇ ಬೆಚ್ಚಿ ಬಿದ್ದಿದ್ದು, ಕೊಲಂಬೋ ಸೇರಿದಂತೆ ಶ್ರೀಲಂಕಾದೆಲ್ಲೆಡೆ ಹೈ ಅಲರ್ಟ್ ಘೋಷಿಸಿ ಕಟ್ಟೆಚ್ಚರ ವಹಿಸಲಾಗಿದೆ.
ಮೂರು ಚರ್ಚ್‌ಗಳು ಮತ್ತು ಮೂರು ಪಂಚತಾರಾ ಹೊಟೇಲ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ.
ಬಟ್ಟಿಕಾಲೋಯಾದ ಚರ್ಚ್‌ನಲ್ಲಿ ಮೊದಲ ನ್ಪೋಟ ಸಂಭವಸಿದ್ದು, ಬಳಿಕ ಕೊಲಂಬೋದ ಕೊಚ್ಚಿಕೊಡೆಯ ಚರ್ಚ್‌ನಲ್ಲಿ ಸ್ಫೋಟ ಸಂಭವಿಸಿದೆ.
ಈಸ್ಟರ್ ಆಚರಣೆಗಾಗಿ ಭಾರೀ ಸಂಖ್ಯೆಯ ಜನರು ಚರ್ಚ್‌ನಲ್ಲಿ ಜಮಾವಣೆಗೊಂಡಿರುವುದನ್ನು ಗುರಿಯಾಗಿರಿಸಿಕೊಂಡು ಭೀಕರ ದಾಳಿ ನಡೆಸಲಾಗಿದೆ.
ಕೊಲಂಬೋ ನಗರದಲ್ಲಿ ಸೇನಾ ಪಡೆಗಳ ತುಕಡಿಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ.
ಪ್ರಧಾನಿ ರಣಿಲ್ ವಿಕ್ರಮಸಿಂಘೆ ಅವರು ಭದ್ರತಾ ಸಮಿತಿಯ ತುರ್ತು ಸಭೆಯನ್ನು ಕರೆದು ಸ್ಫೋಟಗಳ ಬಗ್ಗೆ ವಿವರ ಕೇಳಿದ್ದಾರೆ.
ಸ್ಫೋಟದಲ್ಲಿ ಯಾವುದೇ ಭಾರತೀಯ ಗಾಯಗೊಂಡಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
ಯಾವ ಉಗ್ರ ಸಂಘಟನೆ ದಾಳಿ ನಡೆಸಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.