ಜಗತ್ತಿಡೀ ವ್ಯಾಪಿಸುತ್ತಿದೆ ಕೊರೊನಾ
Team Udayavani, Feb 27, 2020, 1:43 AM IST
ಬೀಜಿಂಗ್/ಹೊಸದಿಲ್ಲಿ: ಚೀನದಲ್ಲಿ ಮರಣ ಮೃದಂಗ ನುಡಿಸಿರುವ ಕೊರೊನಾ ವೈರಸ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದ್ದು, ಮತ್ತಷ್ಟು ರಾಷ್ಟ್ರಗಳಿಗೆ ಲಗ್ಗೆಯಿಡುತ್ತಿದೆ. ಬುಧ ವಾರ ಫ್ರಾನ್ಸ್ ನಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು, ಗ್ರೀಸ್‌ನಲ್ಲೂ ಪ್ರಥಮ ಬಾರಿಗೆ ಮಹಿಳೆಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.
ದಕ್ಷಿಣ ಕೊರಿಯಾದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಬುಧವಾರ ಇದು 1,261 ಆಗಿದೆ. 11 ಮಂದಿ ಈವರೆಗೆ ಮೃತಪಟ್ಟಿದ್ದಾರೆ. ಇಲ್ಲಿರುವ ಅಮೆರಿಕದ ಯೋಧರೊಬ್ಬರಿಗೆ ಸೋಂಕಿರುವುದು ದೃಢಪಟ್ಟಿದೆ. ಇರಾನ್‌ನಲ್ಲಿ ಮತ್ತೆ ನಾಲ್ವರು ಕೋವಿಡ್-19ಗೆ ಬಲಿಯಾಗಿದ್ದು, ಮೃತರ ಸಂಖ್ಯೆ 19ಕ್ಕೇರಿದೆ. ಚೀನದಲ್ಲಿ ಈವರೆಗೆ 2,715 ಮಂದಿ ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ 78064 ಆಗಿದೆ.
ಇನ್ನು, ರಕ್ತದ ಮಾದರಿಯ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ವರದಿ ಬಂದ ಕಾರಣ ಜಪಾನ್‌ನ ಕ್ರೂಸ್ ನೌಕೆಯಿಂದ ತಮ್ಮ ತಮ್ಮ ಮನೆಗಳಿಗೆ ವಾಪಸಾಗಿದ್ದ 12ಕ್ಕೂ ಹೆಚ್ಚು ಮಂದಿಯಲ್ಲಿ ಮತ್ತೆ ರೋಗ
ಲಕ್ಷಣ ಕಂಡುಬಂದಿದೆ. ಇದು ಮತ್ತಷ್ಟು ಆತಂಕ ಸೃಷ್ಟಿಸಿದೆ.
ಆರೋಗ್ಯ ಸಚಿವಾಲಯದಿಂದ ಸೂಚನೆ: ಭಾರತಕ್ಕೆ ಕೊರೊನಾ ಎಂಟ್ರಿಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದರೂ, ಸೋಂಕು ಭೀತಿ ಮಾತ್ರ ಇದ್ದೇ ಇದೆ. ಹೀಗಾಗಿ, ದಕ್ಷಿಣ ಕೊರಿಯಾ, ಇಟಲಿ, ಇರಾನ್ ಸೇರಿದಂತೆ ಸೋಂಕು ವ್ಯಾಪಿಸಿರುವಂಥ ದೇಶಗಳಿಗೆ ಅನಗತ್ಯ ಪ್ರಯಾಣ ಕೈಗೊಳ್ಳದಂತೆ ನಾಗರಿಕರಿಗೆ ಬುಧವಾರ ಕೇಂದ್ರ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.
ವಿಮಾನ ಸಂಚಾರ ರದ್ದು: ಕೊರೊನಾವೈರಸ್‌ನಿಂದಾಗಿ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆಯೂ ಇಳಿಮುಖವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳು 54 ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸುತ್ತಿರುವುದಾಗಿ ವಿಸ್ತಾರಾ ಘೋಷಿಸಿದೆ.
ಮಾರ್ಚ್‌ನಿಂದ ದಿಲ್ಲಿ-ಬ್ಯಾಂಕಾಕ್ ನಡುವೆ ಸಂಚರಿಸುವ 20 ವಿಮಾನಗಳು, ಮುಂಬಯಿ-ಸಿಂಗಾಪುರ ನಡುವಿನ 26 ಮತ್ತು ದಿಲ್ಲಿ-ಸಿಂಗಾಪುರ ನಡುವಿನ 8 ವಿಮಾನಗಳ ಸಂಚಾರ ರದ್ದುಮಾಡುತ್ತಿದ್ದೇವೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.