ಕೊರೊನಾ ಮೃತರ ಸಂಖ್ಯೆ 563ಕ್ಕೆ ಏರಿಕೆ: ವೈರಾಣು ತಡೆಯುವ ವಿಶ್ವಾಸ ನಮಗಿದೆ-ಕ್ಸಿ ಜಿನ್ ಪಿಂಗ್
Team Udayavani, Feb 6, 2020, 9:05 AM IST
ಚೀನಾ: ಕೊರೊನಾ ಸೋಂಕಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ 563ಕ್ಕೆ ಏರಿದೆ. ಮಾತ್ರವಲ್ಲದೆ ವೈರಾಣು ಸೋಂಕು ತುತ್ತಾದವರ ಪ್ರಮಾಣ ಕೂಡ ಏರಿಕೆಯಾಗಿದ್ದು 28,018 ಮುಟ್ಟಿದೆ ಎಂದು ಚೀನಾ ವೈದ್ಯಾಧಿಕಾರಿಗಳು ತಿಳಿಸಿದರು.
ವರದಿಗಳ ಪ್ರಕಾರ 24 ಗಂಟೆಗಳಲ್ಲಿ 73 ಮಂದಿ ಮೃತಪಟ್ಟಿದ್ದು , 3887 ಜನರು ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೊಂದೆಡೆ ವೈರಾಣು ಸೋಂಕಿನಿಂದ ಬಳಲುತ್ತಿದ್ದ 892 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕೊರೊನಾ ವೈರಸ್ ಮೊದಲು ಕಂಡುಬಂದ ವುಹಾನ್ ನ ಹುಬೈ ಪ್ರಾಂತ್ಯ ಕಳೆದ ಎರಡು ವಾರಗಳಿಂದ ಸಂಪೂರ್ಣ ಲಾಕ್ ಡೌನ್ ಆಗಿದ್ದು ರೈಲ್ವೇ ಸ್ಟೇಷನ್ , ವಿಮಾನ ನಿಲ್ದಾಣ, ರಸ್ತೆಗಳು ಸಂಪೂರ್ಣ ಖಾಲಿಯಾಗಿದೆ.
ಜಗತ್ತಿನಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಿಸಿದೆ. 2002-2003 ರಲ್ಲಿ ಮಾರಾಣಾಂತಿಕವಾಗಿದ್ದ ಸಾರ್ಸ್ ಗೆ 800 ಜನರು ಬಲಿಯಾಗಿದ್ದರು.
ಸಾಂಕ್ರಾಮಿಕ ರೋಗ ತಡೆಗಟ್ಟಲು ನಮ್ಮ ಜನರು ಸಮರವನ್ನೇ ಸಾರಿದ್ದಾರೆ. ವೈರಾಣು ಹಬ್ಬುವಿಕೆ ತಡೆಯುವ ವಿಶ್ವಾಸ ನಮಗಿದೆ. ಕೊರೊನಾ ಕುರಿತು ತಪ್ಪು ಮಾಹಿತಿ ರವಾನೆಯಾಗದಂತೆ ಕೂಡ ಎಚ್ಚರಿಕೆ ವಹಿಸಲಾಗುತ್ತಿದೆ.
– ಕ್ಸಿ ಜಿನ್‌ಪಿಂಗ್, ಚೀನಾ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.