ಕೋವಿಡ್ ಹೊಡೆತ-ಜಗತ್ತು ತತ್ತರ: 3 ಲಕ್ಷ ದಾಟಿದ ಮೃತರ ಸಂಖ್ಯೆ, 4.5 ಮಿಲಿಯನ್ ಜನರಿಗೆ ಸೋಂಕು
Team Udayavani, May 15, 2020, 8:58 AM IST
ವಾಷಿಂಗ್ಟನ್: ಜಗತ್ತಿನಾದ್ಯಂತ ಕೋವಿಡ್-19 ಗೆ ಬಲಿಯಾದವರ ಸಂಖ್ಯೆ 3 ಲಕ್ಷ ದಾಟಿದ್ದು, ಸುಮಾರು 4.5 ಮಿಲಿಯನ್ ಗಿಂತಲೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಿದ್ದಾರೆ ಎಂದು ರಾಯ್ ಟರ್ಸ್ ಅಂಕಿ ಅಂಶಗಳು ತಿಳಿಸಿವೆ.
ಮೃತರ ಪ್ರಮಾಣ ಅಮೆರಿಕಾದಲ್ಲೇ ಹೆಚ್ಚಿದ್ದು (86.912), ಸೋಂಕಿತರ ಸಂಖ್ಯೆ ಕೂಡ (1.4 ಮಿಲಿಯನ್) ದ್ವಿಗುಣಗೊಳ್ಳುತ್ತಿದೆ. ಸ್ಪೇನ್, ರಷ್ಯಾ, ಯುಕೆ, ಇಟಲಿಯಲ್ಲಿ ಕೋವಿಡ್ 19 ವೈರಸ್ ತಹಬದಿಗೆ ಬರುವ ಲಕ್ಷಣ ಗೋಚರಿಸುತ್ತಿಲ್ಲವಾಗಿದ್ದು, ಸಣ್ಣ-ಪುಟ್ಟ ರಾಷ್ಟ್ರಗಳಂತೂ ವೈರಸ್ ಹೊಡೆತಕ್ಕೆ ನಲುಗಿ ಹೋಗಿವೆ.
ಭಾರತದಲ್ಲಿ ಗುರುವಾರದ ವೇಳೆಗೆ ಸೋಂಕಿತರ ಸಂಖ್ಯೆ 78 ಸಾವಿರಕ್ಕೆ ಏರಿಕೆಯಾಗಿದ್ದು, 2,549 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರದಲ್ಲಿ ಸುಮಾರು 2 ಮಿಲಿಯನ್ ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಅಮೆರಿಕಾದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ವೈರಸ್ ಆರ್ಭಟಕ್ಕೆ 1,754 ಜನರು ಬಲಿಯಾಗಿದ್ದು ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ. ಜಗತ್ತಿನಾದ್ಯಂತ ಸುಮಾರು 17,03,808 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.