ಕೋವಿಡ್ 19 ದೀರ್ಘ ಕಾಲದ ಶ್ವಾಶಕೋಶ ಸಮಸ್ಯೆಗೆ ಕಾರಣವಾಗಬಹುದು : ಅಧ್ಯಯನ
Team Udayavani, May 27, 2021, 7:54 PM IST
ವಾಷಿಂಗ್ಟನ್ : ಕೋವಿಡ್ ಸೊಂಕಿಗೆ ಒಳಗಾದವರಿಗೆ ಮುಂದಿನ ದಿನಗಳಲ್ಲಿ ಶ್ವಾಸಕೊಶದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎಂಬ ಸಂಶೋಧನಾ ವರದಿಯೊಂದು ಹೊರ ಬಿದ್ದಿದೆ.
ಅಮೇರಿಕಾದ ಶೆಫೀಲ್ಡ್ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಈ ಆಘಾತಕಾರಿ ವರದಿ ಹೊರ ಬಿದ್ದಿದ್ದು, ಅಧ್ಯಯನಕ್ಕೆ ಒಳಪಡಿಸಿದ ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಭಾರತದಲ್ಲಿ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡಲಾಗಿದೆ? ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರರಹಿತ
ರೇಡಿಯಾಲಜಿ ಜರ್ನಲ್ ನಲ್ಲಿ ಪ್ರಕಟಗೊಂಡ ಅಮೇರಿಕಾದ ಶೆಫೀಲ್ಡ್ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ವರದಿಯು ಅಧ್ಯಯನಕ್ಕೆ ಒಳಪಡಿಸಿದವರಲ್ಲಿ ಹೆಚ್ಚಿನವರಲ್ಲಿ ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡಿದ್ದು, ಆದರೂ ಇದರ ಸತ್ಯಾಸತ್ಯತೆಯನ್ನು ಅವಲೋಕಿಸಲು ದೊಡ್ಡ ಪ್ರಮಾಣದಲ್ಲಿ ಅಧ್ಯಯನ ನಡೆಯಬೇಕು ಎಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.
ಹೈಪರ್ ಪೋಲರೈಸ್ಡ್ ಕ್ಸೆನಾನ್ ಎಂಆರ್ ಐ (ಎಕ್ಸ್ ಎಂ ಆರ್ ಐ) ಸ್ಕ್ಯಾನ್ ಗಳು ಕೆಲವು ಕೋವಿಡ್ -19 ರೋಗಿಗಳ ಶ್ವಾಸಕೋಶದಲ್ಲಿ ಮೂರು ತಿಂಗಳಿಗಿಂತ ಹೆಚ್ಚು ಅಸಹಜತೆಯನ್ನು ಉಂಟುಮಾಡಿದೆ. ಸೋಂಕಿನಿಂದ ಗುಣಮುಖರಾಗಿ ಬಂದಾಗ ಅಡ್ಡ ಪರಿಣಾಮವಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಿದೆ.
ಸೋಂಕಿನಿಂದ ಗುಣಮುಖರಾಗಿ ಮೂರು, ಆರು ಕೆಲವೊಬ್ಬರಿಗೆ ಒಂಬತ್ತು ತಿಂಗಳುಗಳ ತನಕ ಈ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಅಧ್ಯಯನ ವರದಿ ತಿಳಿಸಿದೆ.
ಇದನ್ನೂ ಓದಿ : ಕ್ಯಾಂಟರ್ ಡಿಕ್ಕಿ : ಪೆಟ್ಟಿಗೆ ಅಂಗಡಿ ಧ್ವಂಸ
ಆಕ್ಸ್ ಫರ್ಡ್ ನ ಅಧ್ಯಯನದ ಪ್ರಧಾನ ತನಿಖಾಧಿಕಾರಿ ಪ್ರೊಫೆಸರ್ ಫರ್ಗುಸ್ ಗ್ಲೀಸನ್ ಪ್ರತಿಕ್ರಿಯಿಸಿ, ಕೋವಿಡ್ ಸೋಂಕಿನ ದೀರ್ಘಕಾಲದ ಪರಿಣಾಮಗಳಿಂದಾಗಿ ಆಮ್ಲಜನಕವನ್ನು ಒಳಗೆ ತೆಗೆದುಕೊಳ್ಳುವ ಸಾಮರ್ಥ್ಯ ದುರ್ಬಲವಾಗುತ್ತದೆ.
“ಅನೇಕ ಕೋವಿಡ್ 19 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾದ ಹಲವು ತಿಂಗಳುಗಳ ನಂತರವೂ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ, ಅವರ ಸಿಟಿ ಸ್ಕ್ಯಾನ್ ಗಳು ತಮ್ಮ ಶ್ವಾಸಕೋಶಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸೂಚಿಸುತ್ತದೆ” ಎಂದು ಹೇಳಿದ್ದಾರೆ.
ಇನ್ನು, ನಾವು ಅಧ್ಯಯನಕ್ಕೆ ಒಳಪಡಿಸಿದವರೆಲ್ಲರಲ್ಲೂ ಸಾಮಾನ್ಯವಾಗಿ ಇಂತಹ ಸಮಸ್ಯೆಗಳು ಕಾಣಿಸಿಕೊಂಡಿವೆ. ಇದು ಆರಂಭಿಕ ಸಂಶೋಧನೆಯಾಗಿದ್ದು, ಇದುವರೆಗೆ ನಾವು ಅಧ‍್ಯಯನಕ್ಕೆ ಒಳಪಡಿಸಿದವರ ಪೈಕಿ ಶೇಕಡಾ 70 ರಷ್ಟು ಮಂದಿಯಲ್ಲಿ ಉಸಿರಾಟದ ಸಮಸ್ಯೆ ಹಾಘೂ ಶ್ವಾಸಕೋಶದ ಸಮಸ್ಯೆ ಕಂಡು ಬಂದಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಅಧ್ಯಯನ ಆಗಬೇಕು. ಆಗ ಮಾತ್ರ ನಿಖರವಾಗಿ ಕೋವಿಡ್ ಸೋಂಕಿಗೆ ಒಳಗಾದವರಲ್ಲಿ ಶ್ವಾಶಕೊಶದ ಸಮಸ್ಯೆ ಹಾಗೂ ಉಸಿರಾಟದ ಸಮಸ್ಯೆ ಕಂಡು ಬರುತ್ತದೆ ಎಂದು ನಿಖರವಾಗಿ ಹೇಳಲು ಸಾಧ್ಯ ಎಂದು ಗ್ಲೀಸನ್ ಹೇಳಿದ್ದಾರೆ.
ಇದನ್ನೂ ಓದಿ : ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಔಷಧಿ ಆಂಫೊಟೆರಿಸಿನ್ ಬಿ ಪ್ರತಿ ಬಾಟಲಿಗೆ 1200 ರೂ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.