ಚೀನದಲ್ಲಿ ಕೋವಿಡ್ ಕೇಕೆ: ಪ್ರತೀ ದಿನ 9 ಸಾವಿರ ಮಂದಿ ಮೃತ್ಯು
ಭಾರತೀಯ ವಿದ್ಯಾರ್ಥಿ ಮೃತ
Team Udayavani, Jan 2, 2023, 7:05 AM IST
ಬೀಜಿಂಗ್/ಹೊಸದಿಲ್ಲಿ: ಚೀನದಲ್ಲಿ ಕೊರೊನಾ ಕೇಕೆ ಹೆಚ್ಚಾಗಿದ್ದು, ಪ್ರತೀ ದಿನ 9 ಸಾವಿರಕ್ಕಿಂತ ಹೆಚ್ಚು ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಯುನೈಟೆಡ್ ಕಿಂಗ್ಡಮ್ನ ಆರೋಗ್ಯ ಸಂಸ್ಥೆಯೊಂದು ಅಂದಾಜಿಸಿದೆ. ಸದ್ಯ ಚೀನವು ಪ್ರತೀ ದಿನದ ಕೊರೊನಾ ಮಾಹಿತಿ ನೀಡುವುದನ್ನು ನಿಲ್ಲಿಸಿದ್ದು, ನಿಖರ ಮಾಹಿತಿ ಗೊತ್ತಾಗುತ್ತಿಲ್ಲ.
ಈ ಸಂಸ್ಥೆಯ ಪ್ರಕಾರ ಡಿಸೆಂಬರ್ ತಿಂಗಳೊಂದರಲ್ಲೇ ಅಲ್ಲಿ 1 ಲಕ್ಷ ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1.80 ಕೋಟಿ ಪ್ರಕರಣಗಳು ಕಾಣಿಸಿಕೊಂಡಿವೆ. ಜನವರಿ ಮಧ್ಯಭಾಗದ ಹೊತ್ತಿಗೆ ದಿನವೂ 37 ಲಕ್ಷ ಪ್ರಕರಣಗಳು ಕಾಣಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಜ. 23ರ ವೇಳೆಗೆ 5.84 ಲಕ್ಷ ಮಂದಿ ಸಾವನ್ನಪ್ಪಲಿದ್ದಾರೆ ಎಂದು ಈ ಸಂಸ್ಥೆ ಹೇಳಿದೆ.
ಭಾರತೀಯ ವಿದ್ಯಾರ್ಥಿ ಸಾವು
ವೈದ್ಯಕೀಯ ಶಿಕ್ಷಣಕ್ಕೆಂದು ಚೀನಕ್ಕೆ ತೆರಳಿದ್ದ ತಮಿಳುನಾಡು ಮೂಲಕ ವಿದ್ಯಾರ್ಥಿಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಚೀನದಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದ ವಿದ್ಯಾರ್ಥಿ ಅಬ್ದುಲ್ ಶೇಖ್ ಡಿ. 11ರಂದು ಭಾರತದಿಂದ ವಾಪಸ್ ಆಗಿದ್ದರು. ಅಲ್ಲಿಗೆ ಹೋದ ಮೇಲೆ ದಿಢೀರ್ ಆರೋಗ್ಯದಲ್ಲಿ ಬದಲಾವಣೆಯಾಗಿ ಸಾವನ್ನಪ್ಪಿದ್ದಾರೆ. ಇವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.