“ಮೋಚಾ’ ಚಂಡಮಾರುತ: ಅಂಡಮಾನ್ನಲ್ಲಿ ಭಾರಿ ಮಳೆ ಸಾಧ್ಯತೆ
Team Udayavani, May 11, 2023, 7:55 AM IST
ಪೋರ್ಟ್ ಬ್ಲೇರ್: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ “ಮೊಚಾ’ ಚಂಡಮಾರುತ ಅಂಡಮಾನ್ ಮತ್ತು ನಿಕೋಬಾರ್ನ ಪೋರ್ಟ್ ಬ್ಲೇರ್ ದ್ವೀಪದ ಸಮೀಪ ತೀವ್ರತೆ ಪಡೆದಿದ್ದು, ಬುಧವಾರ ಸಂಜೆಯ ನಂತರ ಪೂರ್ಣ ಪ್ರಮಾಣದ ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮೇ 11ರ ನಂತರ ಚಂಡಮಾರುತ ತೀವ್ರಗೊಳ್ಳಲಿದ್ದು, 12ರಂದು ಆಗ್ನೇಯ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಸಮೀಪದ ಪ್ರದೇಶಗಳಲ್ಲಿ ಅತ್ಯಂತ ತೀವ್ರವಾದ ಚಂಡಮಾರುತವಾಗಿ ಬದಲಾಗುತ್ತದೆ. ನಂತರ ಬಾಂಗ್ಲಾದೇಶದ ಕಾಕ್ಸ್ ಬಜಾರ್ ಮತ್ತು ಮ್ಯಾನ್ಮಾರ್ನ ರಾಖೀನ್ ಕರಾವಳಿ ಕಡೆಗೆ ಚಲಿಸಲಿದೆ ಎಂದು ಹೇಳಿದೆ.
ಮೇ 13ರವರೆಗೆ ಸಮುದ್ರಕ್ಕೆ ಇಳಿಯದಂತೆ ಅಂಡಮಾನ್ ಮತ್ತು ನಿಕೋಬಾರ್ನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಆ ಪ್ರದೇಶದಲ್ಲಿ ಮೇ 12ರಂದು ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.