ಷರೀಫ್ ಭ್ರಷ್ಟಾಚಾರ: ದೈನಂದಿನ ವಿಚಾರಣೆಗೆಪಾಕ್ ಸುಪ್ರೀಂ ನಿರ್ಧಾರ
Team Udayavani, Jan 4, 2017, 4:00 PM IST
ಇಸ್ಲಾಮಾಬಾದ್ : ಪನಾಮಾ ಪೇಪರ್ ಲೀಕ್ ಮೂಲಕ ಬಹಿರಂಗವಾಗಿರುವ 67ರ ಹರೆಯದ ಪಾಕ್ ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಕುಟುಂಬ ಸದಸ್ಯರ ಭ್ರಷ್ಟಾಚಾರದ ಬಗ್ಗೆ ದೈನಂದಿನ ನೆಲೆಯಲ್ಲಿ ವಿಚಾರಣೆ ನಡೆಸಲು ಪಾಕಿಸ್ಥಾನದ ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಇದರಿಂದ ನವಾಜ್ ಷರೀಫ್ ಅವರ ರಾಜಕೀಯ ಭವಿಷ್ಯದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಲಿದೆ.
ಜಸ್ಟಿಸ್ ಆಸಿಫ್ ಸಯೀದ್ ಖೋಸಾ ನೇತೃತ್ವದಲ್ಲಿ ಐವರು ಸದಸ್ಯರನ್ನು ಒಳಗೊಂಡ ಪಾಕ್ ಸುಪ್ರೀಂ ಕೋರ್ಟ್ ಪೀಠ ಎರಡು ವಾರಗಳ ಬಳಿಕ ಇಂದು ಪುನಃ ಷರೀಫ್ ಭ್ರಷ್ಟಾಚಾರ ಕುರಿತಾದ ವಿಚಾರಣೆಯನ್ನು ಆರಂಭಿಸಿತು.
ಷರೀಫ್ ಹಾಗೂ ಕುಟುಂಬದವರ ಪನಾಮಾ ಭ್ರಷ್ಟಾಚಾರ ಹಗರಣದ ಕುರಿತಾಗಿ ತನಿಖೆ ನಡೆಯಬೇಕೆಂದು ಆಗ್ರಹಿಸಿ ಸುಪ್ರೀಂ ಕೋರ್ಟಿಗೆ ಸಲ್ಲಿಸಲಾಗಿರುವ ಐದು ಅರ್ಜಿದಾರರ ಪೈಕಿ ಒಬ್ಬರಾಗಿರುವ ಮಾಜಿ ಕ್ರಿಕೆಟಿಗ-ಹಾಲಿ ರಾಜಕಾರಣಿ, ಇಮ್ರಾನ್ ಖಾನ್ ಅವರ ಪಾಕಿಸ್ಥಾನ್ ತೆಹರೀಕ್ ಎ ಇನ್‌ಸಾಫ್ (ಪಿಟಿಐ) ವಿರೋಧ ಪಕ್ಷದ ಪ್ರಮುಖ ಬೇಡಿಕೆಯ ಪ್ರಕಾರ ಷರೀಫ್ ವಿರುದ್ಧದ ವಿಚಾರಣೆಯನ್ನು ದೈನಂದಿನ ನೆಲೆಯಲ್ಲಿ ನಡೆಸಲಾಗುವುದು ಎಂದು ಜಸ್ಟಿಸ್ ಖೋಸಾ ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.