Declaration Of Martial Law: ಗಂಟೆಗಳಲ್ಲೇ ತುರ್ತು ಪರಿಸ್ಥಿತಿ ಹಿಂಪಡೆದ ದಕ್ಷಿಣ ಕೊರಿಯಾ
ಅಧ್ಯಕ್ಷ ಯಿಯೋಲ್ ರಾಜೀನಾಮೆಗೆ ಆಗ್ರಹ, ಸಂಸತ್ತಿನಲ್ಲಿ ಅಮಾನ್ಯಗೊಂಡ ನಿರ್ಣಯ
Team Udayavani, Dec 5, 2024, 6:45 AM IST
ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ಮಂಗಳವಾರ ರಾತೋರಾತ್ರಿ ಘೋಷಿ ಸಿದ್ದ ತುರ್ತು ಪರಿಸ್ಥಿತಿಯನ್ನು ಕೆಲವೇ ಗಂಟೆಗಳ ಬಳಿಕ ಹಿಂದಕ್ಕೆ ಪಡೆದಿದ್ದಾರೆ.
ಈ ಬೆನ್ನಲ್ಲೇ ಅಧ್ಯಕ್ಷ ಯಿಯೋಲ್ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಚರ್ಚಿಸದೆ ರಾತೋರಾತ್ರಿ ತುರ್ತು ಪರಿಸ್ಥಿತಿ ಘೋಷಿಸಿದ್ದು ಸಂವಿಧಾನವನ್ನು ಹತ್ತಿಕ್ಕಿದಂತೆ ಎಂದು ವಿಪಕ್ಷಗಳು ಆರೋಪಿಸಿದೆ.
ತುರ್ತು ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಅನುಮೋದನೆ ದೊರೆಯುವುದಕ್ಕೂ ಮೊದಲೇ ದಕ್ಷಿಣ ಕೊರಿಯದಾದ್ಯಂತ ಸೇನೆ ನಿಯೋಜನೆ ಮಾಡಲಾಗಿತ್ತು. ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆ ಯುತ್ತಿದ್ದಂತೆಯೇ ಅಧಿವೇಶನ ನಡೆಸಿ ತುರ್ತು ಪರಿಸ್ಥಿತಿ ತೀರ್ಮಾನವನ್ನು ಮತಕ್ಕೆ ಹಾಕಲಾಯಿತು. 300 ಸದಸ್ಯರ ಪೈಕಿ 190 ಸದಸ್ಯರು ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರು.
ಈ ನಾಟಕೀಯ ರಾಜಕೀಯ ಬೆಳವಣಿಗೆ ನಡುವೆ ತಮ್ಮ ಹಠಾತ್ ನಿರ್ಧಾರದಿಂದ ಅಧ್ಯಕ್ಷ ಯಿಯೋಲ್ ಸಂವಿಧಾನದ ನಿಯಮ ಉಲ್ಲಂಘಿಸಿದ್ದಾರೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ವ್ಯತಿರಿಕ್ತ ಪರಿಣಾಮ ಎದುರಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.