ಶೃಂಗದ ಹೊರತಾಗಿಯೂ ಉ.ಕೊರಿಯ ಅಣ್ವಸ್ತ್ರ ಬೆದರಿಕೆ ಇದೆ: ಟ್ರಂಪ್‌


Team Udayavani, Jun 23, 2018, 10:48 AM IST

trump-kim-700.jpg

ವಾಷಿಂಗ್ಟನ್‌ : ಈ ತಿಂಗಳ ಆದಿಯಲ್ಲಿ ಉತ್ತರ ಕೊರಿಯ ನಾಯಕ ಕಿಮ್‌ ಜೋಂಗ್‌ ಉನ್‌ ಜತೆ ನಡೆದಿದ್ದ ಯಶಸ್ವೀ ಐತಿಹಾಸಿಕ ಶೃಂಗದ ಹೊರತಾಗಿಯೂ ಉತ್ತರ ಕೊರಿಯದ ವಿರುದ್ಧದ ನಿಷೇಧಗಳನ್ನು ಮುಂದುವರಿಸುವುದಕ್ಕೆ “ವಿಲಕ್ಷಣಕಾರಿ ಮತ್ತು ಅಸಾಮಾನ್ಯ ಅಣ್ವಸ್ತ್ರ ಬೆದರಿಕೆ ಇದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿರುವುದು ವಿಶ್ವದ ಅಚ್ಚರಿಗೆ ಕಾರಣವಾಗಿದೆ.

ಕಳೆದ ವಾರ ಉತ್ತರ ಕೊರಿಯದೊಂದಿಗಿನ ಐತಿಹಾಸಿಕ ಯಶಸ್ವೀ ಶೃಂಗ ಮುಗಿಸಿ ವಾಷ್ಟಿಂಗ್ಟನ್‌ಗೆ ಮರಳಿದ ಟ್ರಂಪ್‌ ಅವರು ಜೂನ್‌ 13ರಂದು “ಈಗಿನ್ನು ಉತ್ತರ ಕೊರಿಯದಿಂದ ಯಾವುದೇ ಅಣ್ವಸ್ತ್ರ ಬೆದರಿಕೆಗಳು ಇಲ್ಲ; ಇವತ್ತು ರಾತ್ರಿ ನಿಶ್ಚಿಂತೆಯಿಂದ ನಿದ್ರೆ ಮಾಡಿ’ ಎಂದು ಟ್ವೀಟ್‌ ಮಾಡಿದ್ದರು. 

ಅದಾಗಿ ಟ್ರಂಪ್‌ ಅವರು ಇದೀಗ ಎಲ್ಲರ ಅಚ್ಚರಿಗೆ ಕಾರಣವಾಗುವ ರೀತಿಯಲ್ಲಿ , ‘ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್‌ ಡಬ್ಲ್ಯು ಬುಶ್‌‌ ಅವರು ಉತ್ತರ ಕೊರಿಯದ ವಿರುದ್ದ ಹೇರಿದ್ದ ಕಠಿನ ಆರ್ಥಿಕ ನಿಷೇಧಗಳನ್ನು ಮುಂದುವರಿಸುವ ಅಗತ್ಯ ಇದೆ’ ಎಂಬುದನ್ನು ವಿವರಿಸುವ ವಿಭಿನ್ನ ಧ್ವನಿಯ ಘೋಷಣೆಗಳನ್ನು ಕಾಂಗ್ರೆಸ್‌ಗೆ ಕಳುಹಿಸಿದ್ದಾರೆ. 

“ಕೊರಿಯ ದ್ವೀಪಕಲ್ಪದಲ್ಲಿ  ಅಣ್ವಸ್ತ್ರ ಪ್ರಸರಣದ ಅಪಾಯ ಈಗಲೂ ಅಂತೆಯೇ ಉಳಿದಿದೆ; ಉತ್ತರ ಕೊರಿಯ ಸರಕಾರದ ಕೃತ್ಯಗಳು ಮತ್ತು ನೀತಿಗಳು ಅಮೆರಿಕದ ರಾಷ್ಟ್ರೀಯ ಭದ್ರತೆಗೆ, ವಿದೇಶ ನೀತಿಗೆ ಮತ್ತು ಆರ್ಥಿಕತೆಗೆ ವಿಲಕ್ಷಣಕಾರಿ ಮತ್ತು ಅಸಾಮಾನ್ಯ ಬೆದರಿಕೆಗಳಾಗಿ ಈ ಹಿಂದೆ ಇರುವಂತೆ ಈಗಲೂ ಮುಂದುವರಿದಿದೆ; ಆದುದರಿಂದ ಇನ್ನೂ ಒಂದ ವರ್ಷದ ಮಟ್ಟಿಗೆ ನಾನು, ಉತ್ತರ ಕೊರಿಯವನ್ನು ದೃಷ್ಟಿಯಲ್ಲಿರಿಸಿಕೊಂಡು, ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಮುಂದುವರಿಸುತ್ತೇನೆ’  ಎಂದು ಟ್ರಂಪ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದರು. 

ಟಾಪ್ ನ್ಯೂಸ್

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribery case: Trump case verdict before he takes office

Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್‌ ಕೇಸಿನ ತೀರ್ಪು

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.