Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್ ಚುನಾವಣೆ ಸಾಧ್ಯತೆ?
ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನುಸ್ ಮಾಹಿತಿ; ಕಳೆದ 3 ಚುನಾವಣೆಗಳಲ್ಲೂ ಅಕ್ರಮ ನಡೆದಿತ್ತು ಎಂದು ಆರೋಪ
Team Udayavani, Jan 6, 2025, 6:45 AM IST
ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಕುರಿತು ಈಗಾಗಲೇ ಸುಳಿವು ನೀಡಿದ್ದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಈಗ ಎರಡು ಸಂಭಾವ್ಯ ದಿನಾಂಕಗಳನ್ನು ಮುಂದಿಟ್ಟಿದ್ದಾರೆ. ಪ್ರಸಕ್ತ ವರ್ಷದ ಡಿಸೆಂಬರ್‌ನಲ್ಲಿ ಅಥವಾ 2026ರ ಮಧ್ಯಭಾಗದಲ್ಲಿ ಚುನಾವಣೆ ನಡೆಸುವುದಾಗಿ ಹೇಳಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನ ಸಂಸದೆ ಸಂಸದೆ ರೂಪಾ ಹಕ್ ಜತೆಗಿನ ಮಾತುಕತೆ ವೇಳೆ ಯೂನುಸ್ ಈ ಮಾಹಿತಿ ನೀಡಿದ್ದಾರೆ. ಜತೆಗೆ, ಮುಂದಿನ ಚುನಾವಣೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗಿರಲಿದೆ ಎಂದೂ ಅವರು ಹೇಳಿದ್ದಾರೆ.
‘ಕಳೆದ 3 ಚುನಾವಣೆಗಳಲ್ಲೂ ಜನರಿಗೆ ಹಕ್ಕು ಚಲಾಯಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೇಶದಲ್ಲಿ ನಕಲಿ ಸಂಸತ್, ನಕಲಿ ಸಂಸದರು ಮತ್ತು ನಕಲಿ ಸ್ಪೀಕರ್ ಇದ್ದರು. ಶೇಖ್ ಹಸೀನಾ ಅವಧಿಯಲ್ಲಿ ಜನರು ಹೇಗೆ ತುಳಿತಕ್ಕೆ ಒಳಗಾಗಿದ್ದರೆಂದರೆ, ಕೊನೆಗೆ ಅವರೆಲ್ಲರೂ ಒಗ್ಗಟ್ಟಾಗಿ ಪ್ರತಿರೋಧ ಒಡ್ಡಬೇಕಾಯಿತು’ ಎಂದು ಯೂನುಸ್ ಹೇಳಿದ್ದಾರೆ.
ಅವ್ಯವಹಾರ ತನಿಖೆ: ಇದೇ ವೇಳೆ, 2014, 2018 ಮತ್ತು 2024 ಸೇರಿದಂತೆ ಈ ಹಿಂದೆ ನಡೆದ ಚುನಾವಣೆಗಳಲ್ಲಿ ಆಗಿರುವ ಅಕ್ರಮಗಳನ್ನು ತನಿಖೆ ಮಾಡಲು ಬಾಂಗ್ಲಾ ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತು ಕಾರಣಗಳನ್ನು ಹುಡುಕಿ ವರದಿ ನೀಡುವಂತೆ ಎಲ್ಲ 10 ಪ್ರಾದೇಶಿಕ ಚುನಾವಣಾಧಿಕಾರಿಗಳಿಗೂ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.