ಭಾರತಕ್ಕೆ ಅಮೆರಿಕ, ಜಪಾನ್ ಸಾಥ್
Team Udayavani, Aug 19, 2017, 8:55 AM IST
ವಾಷಿಂಗ್ಟನ್: ಏಷ್ಯಾ ಪೆಸಿಫಿಕ್ ವಲಯದಲ್ಲಿ ಪ್ರಾಬಲ್ಯ ಸಾಧಿಸಲು ಚೀನ ಮುಂದಾಗಿರುವ ಹಿನ್ನೆಲೆಯಲ್ಲಿ ಅಮೆರಿಕ, ಜಪಾನ್ ದೇಶಗಳು ಭಾರತ, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ಜತೆಗೆ ಭದ್ರತೆ ಹಾಗೂ ಸಹಕಾರ ದ್ವಿಪಕ್ಷೀಯ ಒಪ್ಪಂದ ಮುಂದುವರಿಸಿಕೊಂಡು ಹೋಗುವ ಮತ್ತು ಬಾಂಧವ್ಯ ವೃದ್ಧಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿವೆ.
ಭಾರತ – ಚೀನ ಮಧ್ಯೆ ಗಡಿ ವಿವಾದದ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಸಹಜವಾಗಿ ಮಹತ್ವ ಪಡೆದುಕೊಂಡಿದೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕ ಗೃಹ ಇಲಾಖೆ ಕಾರ್ಯದರ್ಶಿ ರೆಕ್ಸ್ ಟಿಲ್ಲರ್‌ಸನ್, ‘ನಮ್ಮಿಂದ ಉತ್ತಮ ಸಹಕಾರ ಹಾಗೂ ಭದ್ರತೆ ಇರಲಿದೆ. ಭಾರತ, ದಕ್ಷಿಣ ಕೊರಿಯಾ ಮತ್ತು ಆಸ್ಟ್ರೇಲಿಯಾ ಜತೆಗಿನ ಒಪ್ಪಂದ ಮುಂದುವರಿಸಿಕೊಂಡು ಹೋಗುವುದರ ಜತೆಗೆ ಬಾಂಧವ್ಯ ವೃದ್ಧಿಸಿಕೊಳ್ಳಲು ಬಯಸುತ್ತೇವೆ” ಎಂದಿದ್ದಾರೆ. ಈ ವೇಳೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್, ಜಪಾನ್ ವಿದೇಶಾಂಗ ಸಚಿವ ಟಾರೋ ಕೊನೋ ಹಾಗೂ ರಕ್ಷಣಾ ಸಚಿವ ಟ್ಸುನೋರಿ ಒಂಡೇರಾ ಅವರೂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.