ಅನಿವಾಸಿ ಭಾರತೀಯ ಕೃಷ್ಣ ಪೆರು ಅಮೆರಿಕ ರಾಯಭಾರಿ
Team Udayavani, Jun 30, 2017, 3:05 AM IST
ವಾಷಿಂಗ್ಟನ್: ಭಾರತ ಮೂಲದ ಅಮೆರಿಕ ನಿವಾಸಿ, ಆರ್ಥಿಕ ತಜ್ಞ ಕೃಷ್ಣ ಆರ್. ಅರಸ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪೆರು ದೇಶದ ಅಮೆರಿಕ ರಾಯಭಾರಿಯನ್ನಾಗಿ ನೇಮಕ ಮಾಡಿದ್ದಾರೆ. 1986ರಿಂದಲೂ ಅಮೆರಿಕದ ರಾಯಭಾರಿಯಾಗಿಯೇ ಕಾರ್ಯನಿರ್ವಹಿಸುತ್ತಿರುವ ಅರಸ್ ಅವರು ಸದ್ಯ ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ರಾಯಭಾರಿಯಾಗಿ ಹಾಗೂ ಡೆಪ್ಯುಟಿ ಚೀಫ್ ಆಫ್ ಮಿಷನ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಥಿಕ ಹಾಗೂ ನೀತಿ ಅಭಿವೃದ್ಧಿಗೊಳಿಸುವ ಕಾರ್ಯದಲ್ಲಿ ತಜ್ಞರೆನಿಸಿಕೊಂಡಿರುವ ಅರಸ್ ಕಳೆದ 3 ದಶಕಗಳಿಂದ ಅಮೆರಿಕದಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ.
ಈಗಾಗಲೇ ಅಮೆರಿಕದ ಏಳು ಬೇರೆ ಬೇರೆ ರಾಯಭಾರಿ ಕಚೇರಿಗಳಲ್ಲಿ ಸೇವೆ ಸಲ್ಲಿಸಿರುವ ಅರಸ್, ವಾಷಿಂಗ್ಟನ್‌ನಲ್ಲಿ ಹಿರಿಯ ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ ಅನುಭವಿ. ಟೆಕ್ಸಾಸ್ ವಿವಿಯಲ್ಲಿ ಎಂಎಸ್, ಜಾರ್ಜ್‌ಟೌನ್ ವಿವಿಯಲ್ಲಿ ಬಿಎಸ್ ಪದವಿ ಪಡೆದುಕೊಂಡಿರುವ ಅರಸ್ ಅವರು ಇಂಗ್ಲಿಷ್, ಸ್ಪ್ಯಾನಿಷ್, ಹಿಂದಿ, ತೆಲುಗು ಭಾಷೆಗಳಲ್ಲಿ ಮಾತನಾಡಬಲ್ಲರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.