ಉಕ್ರೇನ್ ವಿಮಾನ ಪತನದ ಹಿಂದೆ ಇರಾನ್ ಕೈವಾಡ ? ಅನುಮಾನ ವ್ಯಕ್ತಪಡಿಸಿದ ಡೊನಾಲ್ಡ್ ಟ್ರಂಪ್
Team Udayavani, Jan 10, 2020, 9:15 AM IST
ವಾಷಿಂಗ್ಟನ್ : ಸುಮಾರು 180 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಗಳನ್ನು ಹೊತ್ತು ಸಾಗಿದ್ದ ಉಕ್ರೇನಿನ ವಿಮಾನವೊಂದು ಇರಾನ್ ನ ಟೆಹ್ರಾನ್ ನಲ್ಲಿ ಪತನವಾಗಿ ಅಷ್ಟೂ ಜನರ ದುರಂತ ಸಾವಿಗೆ ಕಾರಣವಾದ ಘಟನೆಯ ಬಗ್ಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ, ಈ ವಿಮಾನವನ್ನು ಇರಾನ್ ಹೊಡೆದುರುಳಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಉಕ್ರೇನ್ ದೇಶದ ಅಂತಾರಾಷ್ಟ್ರೀಯ ಬೋಯಿಂಗ್ 737-800 ವಿಮಾನ ರಷ್ಯಾದ ಕೀವ್ ಎಂಬಲ್ಲಿಗೆ ಹೊರಟಿತ್ತು. ಇರಾನ್ ದೇಶದ ಟೆಹ್ರಾನ್ನ ವಿಮಾನ ನಿಲ್ದಾಣದಲ್ಲಿ ಇಳಿದು ಮತ್ತೆ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ 180 ಜನ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್, “ಈ ವಿಮಾನ ನೆರೆಯ ರಾಷ್ಟ್ರದಲ್ಲಿ ಹಾರಾಟ ನಡೆಸುತ್ತಿತ್ತು. ಯಾರೋ ತಪ್ಪು ಮಾಡಿದ್ದಾರೆ ಎನ್ನುವ ಅನುಮಾನ ನನಗಿದೆ,” ಎಂದು ಟ್ರಂಪ್ ಹೇಳಿದ್ದಾರೆ.
ಈ ಕುರಿತು ಅಮೆರಿಕಾ ಮಾಧ್ಯಮಗಳು ಪ್ರತಿಕ್ರಿಯಿಸಿದ್ದು ಇರಾನ್ ಈ ವಿಮಾನವನ್ನು ತಪ್ಪಾಗಿ ಹೊಡೆದುರುಳಿಸಿವೆ ಎಂದು ವರದಿ ಮಾಡಿವೆ. ಮಾತ್ರವಲ್ಲದೆ ಅಮೆರಿಕಾದ ಅಧಿಕಾರಿಯೋರ್ವರು ಇರಾನ್ ವಾಯು ಪಡೆ ಉಕ್ರೇನ್ ವಿಮಾನವನ್ನು ಆಕಸ್ಮಿಕವಾಗಿ ಹೊಡೆದುರುಳಿಸಿರಬಹುದು ಎಂದು ಹೇಳಿಕೆ ನೀಡಿದ್ದಾರೆ.
ಇರಾನ್ ದೇಶದ ಸೇನಾ ಮುಖ್ಯಸ್ಥ ಖಾಸಿಂ ಸೊಲೈಮನಿ ಹತ್ಯೆಯಿಂದಾಗಿ ಕಳೆದ ಒಂದು ವಾರದಿಂದ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆಗೆ ಇರಾನ್ ನೆಲದಲ್ಲಿ ಉಕ್ರೇನ್ ವಿಮಾನ ನೆಲಕ್ಕುರುಳಿದ್ದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿತ್ತು
ಆದರೆ, ತನಿಖೆ ನಡೆಸಿ ವರದಿ ನೀಡಿರುವ ಇರಾನ್ ನಾಗರೀಕ ವಾಯುಯಾನ ಸಂಸ್ಥೆ, “ವಿಮಾನ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ವಿಮಾನದ ಇಂಜಿನ್ನ ಒಂದು ಭಾಗ ಮಿತಿಮೀರಿ ಬಿಸಿಯಾಗಿದ್ದಕ್ಕೆ ಸಾಕ್ಷಿಗಳಿವೆ. ಅಲ್ಲದೆ, ವಿಮಾನ ನೆಲಕ್ಕೆ ಅಪ್ಪಳಿಸುವ ಮುನ್ನವೇ ಬೆಂಕಿಗೆ ಆಹುತಿಯಾಗಿತ್ತು” ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.