ಕೋವಿಡ್-19: ಕಾರ್ಯನಿರ್ವಹಣೆಯಲ್ಲಿ ವಿಫಲವಾದ WHO, ಅಮೆರಿಕಾದಿಂದ ಧನಸಹಾಯ ರದ್ದು: ಟ್ರಂಪ್

Team Udayavani, Apr 15, 2020, 8:50 AM IST

donald-trump-m

ವಾಷಿಂಗ್ಟನ್: ಚೀನಾದ ವುಹಾನ್ ಪ್ರಾಂತ್ಯದಲ್ಲಿ  ಮೊದಲು ಕಂಡುಬಂದ ಕೋವಿಡ್-19 ವೈರಸ್ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಸಮರ್ಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ಸೋಂಕು ಹರಡಲು ಕಾರಣವಾಗಿದಲ್ಲದೆ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಈ ಕಾರಣದಿಂದ ಅಮೆರಿಕಾದಿಂದ ಕೊಡಲಾಗುವ ಧನಸಹಾಯವನ್ನು ರದ್ದು ಮಾಡಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಮಾರಣಾಂತಿಕ ಸಾಂಕ್ರಾಮಿಕ ರೋಗವು ಈಗಾಗಲೇ 1,25,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಕಳೆದ ವರ್ಷ ಚೀನಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಂದಾಗಿನಿಂದ  ವಿಶ್ವದಾದ್ಯಂತ ಸುಮಾರು ಎರಡು ಮಿಲಿಯನ್ ಜನರಿಗೆ ಸೋಂಕು ತಗುಲಿದೆ. ಶತಕೋಟಿ ಜನರಲ್ಲಿ ಜೀವಭಯವನ್ನು ಹೆಚ್ಚಿಸಿದೆ, ಅನೇಕ ರಾಷ್ಟ್ರಗಳು ಸೋಂಕು ಹರಡುವಿಕೆಯನ್ನು ತಡೆಯಲು ಲಾಕ್ ಡೌನ್ ಕ್ರಮಗಳನ್ನು ವಿಧಿಸಿವೆ –  ಈ ಕ್ರಮ ನಿಸ್ಸಂದೇಹವಾಗಿ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ, ಆದರೆ ಜಾಗತಿಕ ಆರ್ಥಿಕತೆಯನ್ನು ಅಧಃಪತನಕ್ಕೆ ತಳ್ಳುತ್ತದೆ.

ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ನಿಗಾವಹಿಸುವಲ್ಲಿ ವಿಫಲವಾದ್ದರಿಂದ  ಅದಕ್ಕೆ ನೀಡಲಾಗುತ್ತಿದ್ದ ಧನಸಹಾಯವನ್ನು ನಿಲ್ಲಿಸಲು ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಾತ್ರವಲ್ಲದೆ ಸೋಂಕು ಹರಡುವಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪಾತ್ರದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೂಡ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಿಶ್ವ ಸಂಸ್ಥೆಯ ರಾಷ್ಟ್ರಗಳ ಪೈಕಿ ಅಮೆರಿಕ ಅತೀ ಹೆಚ್ಚು ಆರ್ಥಿಕ ಸಹಕಾರವನ್ನು ನೀಡುತ್ತಿದೆ. ಕಳೆದ ಬಾರಿ 400 ಮಿಲಿಯನ್ ಡಾಲರ್ ಧನಸಹಾಯ ಮಾಡಲಾಗಿತ್ತು. ಆದರೇ ಇದೀಗ ವಿಶ್ವ ಆರೋಗ್ಯ ಸಂಸ್ಥೆಗೆ ತಲುಪುವ ಹಣದಿಂದ ಏನೆಲ್ಲಾ ಮಹತ್ವದ ಕಾರ್ಯಗಳು ಆಗುತ್ತಿದೆ ಎಂಬುದನ್ನು ಚರ್ಚಿಸಬೇಕಾಗಿದೆ ಎಂದಿದ್ದಾರೆ.

ಜಿನೀವಾ ಮೂಲದ ಸಂಸ್ಥೆಯೊಂದು ಕೂಡ  ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುತ್ತಿದೆ. ಚೀನಾದ ಕೋವಿಡ್ -19  ದತ್ತಾಂಶವನ್ನು ಇತರ ದೇಶಗಳು ಅವಲಂಬಿಸಿರುವುದು  ವಿಶ್ವದಾದ್ಯಂತ ಪ್ರಕರಣಗಳಲ್ಲಿ 20 ಪಟ್ಟು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಜಾಗತಿಕವಾಗಿ ಅಮೆರಿಕಾದಲ್ಲಿ ಸೋಂಕು ಅತೀ ವೇಗವಾಗಿ ವ್ಯಾಪಿಸುತ್ತಿದ್ದು 26 ಸಾವಿರಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ, ಮಾತ್ರವಲ್ಲದೆ 6 ಲಕ್ಷಕ್ಕಿಂತ ಹೆಚ್ಚು ಜನರು ವೈರಾಣು ಪೀಡಿತರಾಗಿದ್ದಾರೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.