ಭಾರತಕ್ಕೆ ಭೇಟಿ ನೀಡಲು ಕಾತುರನಾಗಿದ್ದೇನೆ: ಬಾಹುಬಲಿ ಎಡಿಟೆಡ್ ವಿಡಿಯೋ ಹಂಚಿಕೊಂಡ ಟ್ರಂಪ್
Team Udayavani, Feb 23, 2020, 8:10 AM IST
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ತಮ್ಮ ಬಹು ನಿರೀಕ್ಷಿತ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು “ಭಾರತದಂತಹ ಉತ್ತಮ ಸ್ನೇಹಿತರ ಜೊತೆ ಇರಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.
ಪ್ರಭಾಸ್ ನಟನೆಯ ಬಾಹುಬಲಿ ಸಿನಿಮಾದ ವಿಡಿಯೋದ ತುಣುಕೊಂದಕ್ಕೆ ಡೊನಾಲ್ಡ್ ಟ್ರಂಪ್, ಇವಾಂಕ ಟ್ರಂಪ್, ಮೆಲೇನಿಯಾ ಟ್ರಂಪ್ ಮಾತ್ರವಲ್ಲದೆ ಪ್ರಧಾನಿ ಮೋದಿ ಹಾಗೂ ಜಶೋಧಾ ಬೆನ್ ಅವರ ಮುಖವನ್ನು ಹೊಂದಿಸಲಾಗಿತ್ತು. Sol ಎಂಬ ವೆರಿಫೈ ಆಗದ ಖಾತೆಯಲ್ಲಿದ್ದ ಈ ವಿಡಿಯೋವನ್ನು ಟ್ರಂಪ್ ಹಂಚಿಕೊಂಡು ಭಾರತಕ್ಕೆ ಭೇಟಿ ನೀಡುವ ಕುರಿತು ಟ್ರಂಪ್ ಹರ್ಷ ವ್ಯಕ್ತಪಡಿಸಿದ್ದಾರೆ.
ಸದ್ಯ ಈ ಫೋಸ್ಟ್ ಗೆ 60 ಸಾವಿರಕ್ಕೂ ಅಧಿಕ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 15 ಸಾವಿರ ಮಂದಿ ರೀಟ್ವೀಟ್ ಮಾಡಿದ್ದು 7 ಸಾವಿರ ಕಮೆಂಟ್ ಗಳು ಬಂದಿವೆ.
Look so forward to being with my great friends in INDIA! https://t.co/1jdk3AW6fG
— Donald J. Trump (@realDonaldTrump) February 22, 2020
ಈ ಪೋಸ್ಟ್ ಗೆ ಮೆಚ್ಚುಗೆ, ಆಕ್ಷೇಪ, ವ್ಯಂಗ್ಯವೂ ಕೇಳಿ ಬಂದಿದ್ದು. ಇದುವರೆಗಿನ ನಿಮ್ಮ ಪೋಸ್ಟ್ ಗಳ ಪೈಕಿ ಅತ್ಯಂತ ಕಳಪೆಯದ್ದು ಎಂದು ಒಬ್ಬರು ಅಭಿಪ್ರಾಯಪಟ್ಟರೆ, ಈ ಪೋಸ್ಟ್ ಅಧ್ಬುತವಾಗಿದೆ, ಅತ್ಯಂತ ಕ್ರಿಯಾಶೀಲವಾಗಿದೆ ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಕೆಲವೇ ದಿನಗಳ ಹಿಂದೆ ಬಿಡುಗಡೆಯಾದ ಶುಭ್ ಮಂಗಲ್ ಜ್ಯಾದಾ ಸಾವ್ದಾನ್ ಚಿತ್ರವನ್ನು ಕೂಡ ಟ್ರಂಪ್ ಶ್ಲಾಘಿಸಿದ್ದರು.
ಅಮೆರಿಕ ಅಧ್ಯಕ್ಷ ಟ್ರಂಪ್ ಸೋಮವಾರ ಮಧ್ಯಾಹ್ನದ ವೇಳೆಗೆ ಗುಜರಾತ್ ನ ಅಹಮದಾಬಾದ್‌ಗೆ ಆಗಮಿಸಲಿದ್ದು, ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ 100,000 ಕ್ಕೂ ಹೆಚ್ಚು ಜನರ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.