PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Team Udayavani, Sep 18, 2024, 8:15 AM IST
ಮಿಚಿಗನ್: ಅಮೆರಿಕದ ಮಾಜಿ ಅಧ್ಯಕ್ಷ (United State Of America) ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump)ಮುಂದಿನ ವಾರ ಅಮೆರಿಕ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರನ್ನು ಭೇಟಿ ಮಾಡುವುದಾಗಿ ಮಂಗಳವಾರ(ಸೆ17) ಹೇಳಿದ್ದಾರೆ.
ಮಿಚಿಗನ್‌ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಿರುವ ಕುರಿತು ಟ್ರಂಪ್ ಘೋಷಿಸಿದರು. ಭಾರತದೊಂದಿಗೆ ಯುಎಸ್ ವ್ಯಾಪಾರದ ಬಗ್ಗೆ ಮಾತನಾಡಲಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಆದರೆ, ಉಭಯ ನಾಯಕರು ಎಲ್ಲಿ ಭೇಟಿಯಾಗಲಿದ್ದಾರೆ ಎಂಬ ಬಗ್ಗೆ ಅವರು ಯಾವುದೇ ವಿವರಗಳನ್ನು ನೀಡಿಲ್ಲ.
ಕ್ವಾಡ್ ನಾಯಕರ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೆ.21 ರಿಂದ 23 ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.