ವೈರಸ್ ತಡೆಗಟ್ಟಲು ಟ್ರಂಪ್ ಸರ್ಕಾರ ಸಂಪೂರ್ಣ ವಿಫಲ: ಜೋ ಬಿಡೆನ್ ಆರೋಪ
Team Udayavani, May 9, 2020, 7:59 AM IST
ವಾಷಿಂಗ್ಟನ್:ಕೋವಿಡ್ 19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ನಡೆಸುವಲ್ಲಿ ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಪೂರ್ಣವಾಗಿ ವಿಫಲರಾಗಿದ್ದು, ಇವರ ಸಂಪೂರ್ಣ ಆರ್ಥಿಕ ಕಾರ್ಯತಂತ್ರವು ಶ್ರೀಮಂತ ವರ್ಗಗಳಿಗೆ ಸಹಾಯ ಮಾಡುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಅಮೆರಿಕದ ಮಾಜಿ ಉಪಾಧ್ಯಕ್ಷ ಜೋ ಬಿಡನ್ ಆರೋಪಿಸಿದ್ದಾರೆ.
ಏಪ್ರಿಲ್‌ನಲ್ಲಿ ದೇಶದಲ್ಲಿ 2.05 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಮಹಾ ಆರ್ಥಿಕ ಕುಸಿತದ ನಂತರದ ಗರಿಷ್ಠ ನಿರುದ್ಯೋಗ ದರವು ಈಗ ಶೇಕಡಾ 14.7 ರಷ್ಟಿದೆ . ದಶಕಗಳಲ್ಲೇ ಅಮೆರಿಕಾ ಇಂತಹ ದುರಾಡಳಿತವನ್ನು ಕಂಡಿಲ್ಲ. ವೈರಸ್ ಬಾರದಂತೆ ಮುನ್ನೆಚ್ಚರಿಕೆ ಕೈಗೊಳ್ಳುವಲ್ಲಿ ಟ್ರಂಪ್ ಸಂಪೂರ್ಣ ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ.
ಇತ್ತೀಚಿನ ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯ ವಿರುದ್ಧ ನಮ್ಮ ರಾಷ್ಟ್ರವನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಟ್ರಂಪ್ ಸರಕಾರ ವಿಳಂಬ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಈ ಸರ್ಕಾರ ಆರ್ಥಿಕ ಬಲದ ಪ್ರಮುಖ ಸ್ಥಂಭಗಳನ್ನು ಉರುಳಿಸಿದೆ . ಟ್ರಂಪ್ ಸರ್ಕಾರದ ನೀತಿಯಿಂದಾಗಿ ಸಣ್ಣ ಉದ್ಯಮಗಳು ನೆಲಕಚ್ಚಿವೆ ಎಂದರು.
ಅಮೆರಿಕಾದಲ್ಲಿ ಕೋವಿಡ್ 19 ಮರಣಮೃದಂಗವನ್ನೇ ಬಾರಿಸಿದ್ದು ಇಲ್ಲಿಯವರೆಗೂ 78,615 ಜನರು ಬಲಿಯಾಗಿದ್ದಾರೆ. ಸೋಂಕಿತರ ಪ್ರಮಾಣ ಕೂಡ ಏರುಗತಿಯಲ್ಲಿ ಸಾಗಿದ್ದು 13,21,785 ಮಂದಿ ವೈರಾಣುವಿನಿಂದ ಬಳಲುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.