ಸೌದಿ ಅರೇಬಿಯಾ ವಿ.ನಿಲ್ದಾಣದಲ್ಲಿ ಡ್ರೋನ್ ದಾಳಿ: ಎಂಟು ಮಂದಿಗೆ ಗಾಯ, ವಿಮಾನಗಳಿಗೆ ಹಾನಿ
Team Udayavani, Aug 31, 2021, 3:47 PM IST
ರಿಯಾದ್: ಸೌದಿ ಅರೇಬಿಯಾದ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಾಗಿದ್ದು, ಎಂಟು ಜನರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ದಾಳಿಯ ಪರಿಣಾಮ ಏರ್ ಪೋರ್ಟ್ ನಲ್ಲಿದ್ದ ನಾಗರಿಕ ವಿಮಾನಗಳಿಗೆ ಹಾನಿ ಉಂಟಾಗಿದೆ ಎಂದು ವರದಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಅಭಾ ವಿಮಾನ ನಿಲ್ದಾಣದಲ್ಲಿ ಇದು ಎರಡನೇ ಡ್ರೋನ್ ದಾಳಿಯಾಗಿದ್ದು, ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಹಿಂದಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಯೆಮನ್ನ ಇರಾನ್ ಬೆಂಬಲಿತ ಶಿಯಾ ಹೌತಿ ಬಂಡುಕೋರರು ದಾಳಿ ಮಾಡಿದ್ದಾರೆಂದು ಆರೋಪಿಸಲಾಗಿತ್ತು.
ಇದನ್ನೂ ಓದಿ:ಗಂಡನ ಮನೆ ತೊರೆಯಲು ಯೋಜಿಸಿದ್ದಾರಾ ನಟಿ ಶಿಲ್ಪಾ ಶೆಟ್ಟಿ ?
ಯೆಮೆನ್ನಲ್ಲಿ ಇರಾನ್ ಬೆಂಬಲಿತ ಶಿಯಾ ಬಂಡುಕೋರರ ವಿರುದ್ಧ ಹೋರಾಡುತ್ತಿರುವ ಸೌದಿ ನೇತೃತ್ವದ ಸೇನಾ ಒಕ್ಕೂಟವು ದಾಳಿಯ ಅಥವಾ ಸಾವು ನೋವುಗಳ ಬಗ್ಗೆ ವಿವರಗಳನ್ನು ನೀಡಿಲ್ಲ. ಬದಲಾಗಿ ಒಕ್ಕೂಟವು ತನ್ನ ಪಡೆಗಳು ಸ್ಫೋಟಕ ಡ್ರೋನ್ ಅನ್ನು ತಡೆದಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.