Earthquake: ತೈವಾನ್ ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ 6.0 ತೀವ್ರತೆಯ ಭೂಕಂಪ
Team Udayavani, Apr 4, 2024, 10:29 AM IST
ಟೋಕಿಯೋ: ತೈವಾನ್‌ನಲ್ಲಿ ಸಂಭವಿಸಿದ ಭೂಕಂಪ ಮರೆಯುವ ಮುನ್ನವೇ ಚೀನಾ ಮತ್ತು ಜಪಾನ್‌ನಲ್ಲಿ ಭೂಕಂಪ ಸಂಭವಿಸಿದೆ. ವಾಯುವ್ಯ ಚೀನಾದ ಕಿಂಗ್ಹೈ ಪ್ರಾಂತ್ಯದ ಮಂಗ್ಯಾ ನಗರದಲ್ಲಿ ಗುರುವಾರ ಬೆಳಗ್ಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಚೀನಾ ಭೂಕಂಪ ನೆಟ್‌ವರ್ಕ್ ಕೇಂದ್ರ (ಸಿಇಎನ್‌ಸಿ) ತಿಳಿಸಿದೆ.
ಕಂಪನದ ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಮತ್ತೊಂದೆಡೆ, ಜಪಾನ್‌ನ ಹೊನ್ಶು ಪೂರ್ವ ಕರಾವಳಿಯಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಇದರ ಕೇಂದ್ರ ಬಿಂದು 32 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಆದರೆ, ಈ ಎರಡು ಭೂಕಂಪಗಳಿಗೆ ಸಂಬಂಧಿಸಿದ ಯಾವುದೇ ಜೀವಹಾನಿ ಮತ್ತು ಆಸ್ತಿ ಹಾನಿಯ ವಿವರಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಚೀನಾದ ನೆರೆಯ ತೈವಾನ್ ನಲ್ಲಿ ಬುಧವಾರ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು ಬಳಿಕ ಅಧಿಕಾರಿಗಳು ಸುನಾಮಿ ಎಚ್ಚರಿಕೆಯನ್ನೂ ನೀಡಿದ್ದರು. ಈ ಹಿನ್ನಲೆಯಲ್ಲಿ ಚೀನಾ ಮತ್ತು ಜಪಾನ್ ನಲ್ಲಿ ಕಂಪನ ಉಂಟಾಗಿ ಆತಂಕ ಎದುರಾಗಿದೆ. ತೈವಾನ್‌ನಲ್ಲಿ ಇದುವರೆಗೆ ಒಂಬತ್ತು ಜನರು ಸಾವನ್ನಪ್ಪಿದ್ದರೆ, 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.100 ಕ್ಕೂ ಹೆಚ್ಚು ಕಟ್ಟಡಗಳು, ಅನೇಕ ರಸ್ತೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ. ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಕೂಡ ಮುಂದುವರೆದಿದೆ.
ಇದನ್ನೂ ಓದಿ: Forbes ನಿಯತಕಾಲಿಕ ಬಿಡುಗಡೆ: ಜಗತ್ತಿನ ಶ್ರೀಮಂತರ ಪಟ್ಟಿಗೆ ಭಾರತದಿಂದ 25 ಮಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.