Pakistan: ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಪರೀಕ್ಷೆ ಸಿದ್ಧತೆಯಲ್ಲಿದ್ದ 7 ಶಿಕ್ಷಕರ ಹತ್ಯೆ
Team Udayavani, May 4, 2023, 9:26 PM IST
ಇಸ್ಲಾಮಾಬಾದ್: ಶಾಲೆಯೊಂದರ ಮೇಲೆ ಮುಸುಕುಧಾರಿ ದುಷ್ಕರ್ಮಿಗಳ ಗುಂಪೊಂದು ಗುಂಡಿನ ದಾಳಿ ನಡೆಸಿ ಏಳು ಮಂದಿ ಶಿಕ್ಷಕರನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಲೆಯೊಂದರಲ್ಲಿ ನಡೆದಿದೆ.
ಇಲ್ಲಿನ ಕರಾಮ್ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಏಕಾಏಕಿ ನುಗ್ಗಿ, ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಶಾಲೆಯಲ್ಲಿ ಶಿಕ್ಷಕರು ಪರೀಕ್ಷೆ ಸಿದ್ಧತೆಗಳನ್ನು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ರೀತಿ ಮತ್ತೂಂದು ಘಟನೆಯಲ್ಲಿ ಶಿಕ್ಷಕರೊಬ್ಬರನ್ನು ಉದ್ದೇಶಪೂರ್ವಕವಾಗಿ ವಾಹನದಲ್ಲಿ ಡಿಕ್ಕಿ ಹೊಡೆದು ಹತ್ಯೆಗೈದಿರುವುದು ವರದಿಯಾಗಿದೆ. ಮೃತರಾಗಿರುವ ಎಲ್ಲ ಶಿಕ್ಷಕರು ಮುಸ್ಲಿಂ ಶಿಯಾ ಸಮುದಾಯಕ್ಕೆ ಸೇರಿದವರೆಂಬ ಮಾತು ಕೇಳಿಬಂದಿದ್ದು, ಶಿಯಾ ಮುಸ್ಲಿಮರನ್ನು ಆಗಾಗ ಗುರಿಯಾಗಿಸುತ್ತಿರುವ ಘಟನೆಯ ಭಾಗವಾಗಿ ಈ ದಾಳಿ ನಡೆದಿರಬಹುದೆಂಬ ಗುಮಾನಿಯೂ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಸಿಂಘು ಗಡಿಯಲ್ಲಿ ಭಾರತೀಯ ಕುಸ್ತಿಪಟು ಗೀತಾ ಪೋಗಟ್, ಪತಿ ಪವನ್ ಸರೋಹಾ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.