ಚುನಾವಣೆ ಸುರಕ್ಷತೆಗೆ ಬದ್ಧ
Team Udayavani, Apr 12, 2018, 6:00 AM IST
ವಾಷಿಂಗ್ಟನ್: ಭಾರತ ಸೇರಿದಂತೆ ವಿಶ್ವದ ಇತರ ದೇಶಗಳಲ್ಲಿನ ಚುನಾವಣೆಯಲ್ಲಿ ಭದ್ರತೆಗೆ ನಾವು ಬದ್ಧವಾಗಿದ್ದೇವೆ ಎಂದು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದಾರೆ. ಚುನಾವಣಾ ವಿಶ್ಲೇಷಣೆ ಸಂಸ್ಥೆ ಕೇಂಬ್ರಿಜ್ ಅನಾಲಿಟಿಕಾ ಹಗರಣಕ್ಕೆ ಸಂಬಂಧಿಸಿ ಅಮೆರಿಕದ ಸಂಸತ್ತಿಗೆ ವಿವರಣೆ ನೀಡಿದ ಮಾರ್ಕ್, ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣೆಯ ವೇಳೆ ವಿದೇಶಿ ಹಸ್ತಕ್ಷೇಪ ಹಾಗೂ ದತ್ತಾಂಶ ಗೌಪ್ಯತೆಯ ವಿಚಾರವನ್ನು ಚರ್ಚಿಸಲಾಗಿದೆ ಎಂದಿದ್ದಾರೆ. ಈ ವಿಚಾರಗಳನ್ನು ಕಂಪೆನಿ ಅತ್ಯಂತ ಪ್ರಮುಖವಾಗಿ ಪರಿಗಣಿಸಿದೆ ಮತ್ತು ನಾವು ಈ ನಿಟ್ಟಿನಲ್ಲಿ ಮಹತ್ವದ ಜವಾಬ್ದಾರಿ ಹೊಂದಿದ್ದೇವೆ ಎಂದು ಮಾರ್ಕ್ ಹೇಳಿದ್ದಾರೆ.
ಈ ಮಧ್ಯೆ ನನ್ನ ದತ್ತಾಂಶವನ್ನೂ ಕೇಂಬ್ರಿಜ್ ಅನಾಲಿಟಿಕಾಗೆ ನೀಡಲಾಗಿತ್ತು ಎಂಬ ಅಚ್ಚರಿಯ ಅಂಶವನ್ನೂ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ ಮಾರ್ಕ್ ಬಹಿರಂಗಗೊಳಿಸಿದ್ದಾರೆ. ಚುನಾವಣೆ ವಿಶ್ಲೇಷಣೆಗಾಗಿ ಫೇಸ್‌ಬುಕ್ ಬಳಕೆದಾರರ ದತ್ತಾಂಶವನ್ನು ಕೇಂಬ್ರಿಜ್ ಅನಾಲಿಟಿಕಾ ಬಳಸಿಕೊಂಡಿದ್ದನ್ನು ತಡೆಯಲು ಫೇಸ್‌ಬುಕ್‌ಗೆ ಸಾಧ್ಯವಾಗಿಲ್ಲ ಎಂಬುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಅಲ್ಲದೆ ಫೇಸ್‌ಬುಕ್ ಬಳಕೆದಾರರ ದತ್ತಾಂಶವನ್ನು ಅನುಮತಿ ಇಲ್ಲದೇ ಇತರ ಉದ್ದೇಶಗಳಿಗೆ ಕೇಂಬ್ರಿಜ್ ಅನಾಲಿಟಿಕಾ ಬಳಸಿಕೊಂಡಿತ್ತು.
ರಾಹುಲ್ ಕ್ಷಮೆ ಕೇಳಬೇಕು ಎಂದ ಪ್ರಸಾದ್: ಕೇಂಬ್ರಿಜ್ ಅನಾಲಿಟಿಕಾದ ದತ್ತಾಂಶವನ್ನು ಬಳಸಿ ಚುನಾವಣಾ ಫಲಿತಾಂಶವನ್ನು ಬದಲಿಸಲು ಪ್ರಯತ್ನಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ. ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವಲ್ಲಿ ಕೇಂಬ್ರಿಜ್ ಅನಾಲಿಟಿಕಾ ಪಾತ್ರ ಸ್ಪಷ್ಟವಾಗಿದೆ. ಹೀಗಾಗಿ ರಾಹುಲ್ ಕ್ಷಮೆ ಕೇಳಬೇಕು ಮತ್ತು ಇನ್ನು ಮತದಾರರ ದತ್ತಾಂಶ ಬದಲಿಸುವುದಿಲ್ಲ ಮತ್ತು ಸಮಾಜವನ್ನು ಒಡೆಯುವುದಿಲ್ಲ ಎಂದು ಖಚಿತಪಡಿಸಬೇಕು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.