ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಮುಖ್ಯಮಂತ್ರಿ ಮನವಿ


Team Udayavani, Jan 21, 2020, 8:15 PM IST

cm1

ದಾವೊಸ್: ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಇಂದು ವಿವಿಧ ಹೂಡಿಕೆದಾರರು ಹಾಗೂ ಉದ್ಯಮಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಕೃಷಿ ಕೇಂದ್ರಿತ ಉದ್ಯಮ ಸ್ಥಾಪನೆ ಮಾಡುವಂತೆ ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಒತ್ತು ನೀಡುವಂತೆ ಮನವಿ ಮಾಡಿದರು.

ಇಂದು ಬೆಳಿಗ್ಗೆ ಸ್ವಿಸ್ ಮೂಲದ 2000 ವ್ಯಾಟ್ ಕಂಪೆನಿಯ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರೈತರ ಆತ್ಮಹತ್ಯೆಯ ಪ್ರವೃತ್ತಿಯನ್ನು ತಡೆಯುವ ನಿಟ್ಟಿನಲ್ಲಿ ಕೃಷಿ ಆಧಾರಿತ ಆರ್ಥಿಕತೆಯನ್ನು ಸುಧಾರಿಸುವ ಯೋಜನೆಗಳ ಕುರಿತು ಆಸಕ್ತಿ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಹೊಸ ಯೋಜನೆಗಳು, ಬಂಡವಾಳ ಹೂಡಿಕೆ ಖಂಡಿತ ಬರಬೇಕು. ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡುವ ಜೊತೆಗೆ ಯುವಕರನ್ನು ಸ್ವಾವಲಂಬಿಗಳನ್ನಾಗಿಸಲು ಉದ್ಯೋಗಾವಕಾಶ ಸೃಷ್ಟಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟರು.

ಈ ಸಭೆಯಲ್ಲಿ 2000 ವ್ಯಾಟ್ ಕಂಪೆನಿಯ ಫುಡ್ ಕ್ಲಸ್ಟರ್ ಗಳ ಅಭಿವೃದ್ಧಿ ಯೋಜನೆಯ ಕುರಿತು ವಿಶೇಷ ಆಸಕ್ತಿ ವಹಿಸಿದ ಮುಖ್ಯಮಂತ್ರಿಗಳು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಇಂತಹ ಯೋಜನೆಗಳಿಂದ ಕೃಷಿ ಆರ್ಥಿಕತೆ ಉತ್ತಮಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು. ಈ ಕುರಿತು ಪ್ರಾತ್ಯಕ್ಷಿಕೆ ನೀಡಿದ ಕಂಪೆನಿಯ ಪ್ರತಿನಿಧಿಗಳು,, ತಮ್ಮ ಬಳಿ ತಂತ್ರಜ್ಞಾನ ಇರುವುದಾಗಿ ಹಾಗೂ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಲು ಪೂರಕವಾದ ಫುಡ್ ಕ್ಲಸ್ಟರುಗಳ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿರುವುದಾಗಿ ವಿವರಿಸಿದರು. “ಸತ್ವಪೂರ್ಣ ಆಹಾರ ಬೆಳೆಯಲು ಅಗತ್ಯವಿರುವ ಎಲ್ಲ ನೆರವು ಮತ್ತು ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳನ್ನು ನಾವು ಒದಗಿಸಲಿದ್ದು, ಈ ಉತ್ಪನ್ನಗಳ ಮೌಲ್ಯವರ್ಧನೆಯ ಮೂಲಕ ಮಾರುಕಟ್ಟೆ ಒದಗಿಸಲಾಗುವುದು” ಎಂದು ಸಂಸ್ಥೆಯ ವಿಜ್ಞಾನಿ ಆಂಡ್ರಿಯಾಸ್ ಬಿಂಕರ್ಟ್ ಅವರು ತಿಳಿಸಿದರು.

ಕಂಪೆನಿಯ ಸಂಸ್ಥಾಪಕ ಪಾಲುದಾರ ಮಾಧವ್ ಭಾಗವತ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಸ್ಮಾರ್ಟ್ ಸಿಟಿಯ ವಿನೂತನ ಪರಿಕಲ್ಪನೆಯ ಕುರಿತು ಮಾಹಿತಿ ನೀಡಿದರು. ತಮ್ಮ ಕಂಪೆನಿಯು ಇಂಗಾಲ ತಟಸ್ಥ ಸ್ಮಾರ್ಟ್ ಉಪನಗರಗಳ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿದ್ದು, ಈಗಾಗಲೇ ಪುಣೆ ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದೊಂದಿಗೆ ಒಪ್ಪಂದ ಸಹಿ ಮಾಡಿರುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ರಿನ್ಯೂ ಪವರ್ ಪ್ರತಿನಿಧಿಗಳು ರಾಜ್ಯದ ಬರಡು ಭೂಮಿಯಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಆಸಕ್ತಿ ತೋರಿದರು. ಕಂಪಪೆನಿಯ ಸಿಇಓ ಸಮಂತ್ ಸಿನ್ಹಾ ಅವರು ತಮ್ಮ ಕಂಪೆನಿಯು ರಾಜ್ಯದ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾದ ವಿದ್ಯುತ್ ಸಂಗ್ರಹಿಸುವ ಬ್ಯಾಟರಿಗಳು ಮತ್ತು ಇತರ ಉಪಕರಣಗಳನ್ನು ಅಳವಡಿಸಲು ಯೋಜಿಸಿರುವುದಾಗಿ ತಿಳಿಸಿದರು. ಆಡಳಿತಾತ್ಮಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಲು ಸರ್ಕಾರ ಕ್ರಮ ವಹಿಸುವಂತೆ ಅವರು ಸಲಹೆ ಮಾಡಿದರು.

ಇಂದು ಮುಖ್ಯಮಂತ್ರಿಯವರು ಹಾಗೂ ಸರ್ಕಾರದ ಅಧಿಕಾರಿಗಳನ್ನು ಭೇಟಿ ಮಾಡಿದ ಕಂಪೆನಿಗಳ ಪ್ರತಿನಿಧಿಗಳಲ್ಲಿ ಬಹುತೇಕ ಮಂದಿ ರೈತರಿಂದ ಜಮೀನು ಖರೀದಿಸಲು ಸರ್ಕಾರದ ಕೆಲವು ಅನಪೇಕ್ಷಿತ ನಿಯಮಗಳನ್ನು ತಿದ್ದುಪಡಿ ಅಥವಾ ರದ್ದುಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯವರು ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಹೂಡಿಕೆದಾರರ ನಿಯೋಗಗಳೊಂದಿಗೆ ಚರ್ಚಿಸುವಾಗ ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸುವ, ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ವಿಷಯಕ್ಕೆ ಹೆಚ್ಚಿನ ಒತ್ತು ನೀಡಿದರು. ನಮ್ಮ ರೈತರು ಮತ್ತು ಗ್ರಾಮೀಣ ಯುವಕರ ಹಿತ ರಕ್ಷಣೆ ಮಾಡುವ ಹೂಡಿಕೆದಾರರು ಹಾಗೂ ಕೈಗಾರಿಕೆಗಳಿಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದೆ ಎಂದು ಅವರು ನುಡಿದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಐಟಿ, ಬಿಟಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಸೆಲ್ವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.