ಭ್ರಷ್ಟಾಚಾರ ವಿಚಾರಣೆ: ಕೋರ್ಟಿಗೆ ಹಾಜರಾದ ಜೇಕಬ್ ಝೂಮಾ
Team Udayavani, Apr 6, 2018, 3:36 PM IST
ಡರ್ಬಾನ್ : ಬಹ್ಮಾಂಡ ಭ್ರಷ್ಟಾಚಾರದ ಕಾರಣಕ್ಕೆ ಅಧಿಕಾರ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕದ ಮಾಜಿ ಅಧ್ಯಕ್ಷ ಜೇಕಬ್ ಝೂಮಾ ಅವರು ದೀರ್ಘ ಕಾಲದಿಂದ ಎದುರಿಸುತ್ತಿರುವ ಭ್ರಷ್ಟಾಚಾರ ವಿಚಾರಣೆಯ ಪ್ರಯುಕ್ತ ಇಂದು ಕಿಕ್ಕಿರಿದು ತುಂಬಿದ ಡರ್ಬಾನ್ ನ್ಯಾಯಾಲಯದಲ್ಲಿ ಹಾಜರಾಗಿ ಕಟಕಟೆಯಲ್ಲಿ ಸಾವಕಾಶವಾಗಿ ನಿಂತು ಏನೂ ಆಗಿಲ್ಲವೆಂಬಂತೆ ವರ್ತಿಸಿದರು.
75ರ ಹರೆಯದ ಝೂಮಾ ವಿರುದ್ಧದ ವಿಚಾರಣೆಯ ಮುಂದಿನ ದಿನಾಂಕವನ್ನು ನ್ಯಾಯಾಲಯ ಜೂನ್ 8ಕ್ಕೆ ನಿಗದಿಸಿತು.
ಬಳಿಕ ಕೋರ್ಟಿನಿಂದ ಹೊರ ಬಂದ ಝೂಮಾ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದರು. ಅವರ ಬೆಂಬಲಿಗರು ಆಳುವ ಆಫ್ರಿಕನ ನ್ಯಾಶನಲ್ ಕಾಂಗ್ರೆಸ್ ಪಕ್ಷದ ಧ್ವಜ ಮತ್ತಿತರ ಚಿಹ್ನೆಗಳನ್ನು ಪ್ರದರ್ಶಿಸಿದರು.
“ನನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾದವುಗಳು’ ಎಂದು ಝೂಮಾ ಆಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.