ತಾನು ಸಾಚಾ ಎಂದು ತೋರಿಸಲು ಉಗ್ರ ಸಯೀದ್ ವಿರುದ್ಧ ಪಾಕ್ ಸುಳ್ಳು ಕೇಸು!
Team Udayavani, Aug 18, 2019, 5:19 PM IST
ಇಸ್ಲಾಮಾಬಾದ್: ಭಯೋತ್ಪಾದನೆ ವಿಷಯದಲ್ಲಿ ನಾವು ಸತ್ಯವಂತರಾಗಿ ನಡೆಯುತ್ತಿದ್ದೇವೆ, ಯಾವುದೇ ರೀತಿ ಬೆಂಬಲ ಕೊಡುತ್ತಿಲ್ಲ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ತೋರಿಸಲು ಪಾಕಿಸ್ಥಾನ ಇದೀಗ ಹೊಸ ನಾಟಕ ಆರಂಭಿಸಿದೆ.
ಹಣಕಾಸು ಕ್ರಿಯಾ ಕಾರ್ಯಪಡೆ (ಎಫ್ಎಟಿಎ) ಸಭೆಗೆ ದಿನಗಳು ಹತ್ತಿರವಾಗುತ್ತಿರುವಂತೆಯೇ, ಒಂದು ಸುಳ್ಳು ಎಫ್ಐಆರ್ ಅನ್ನು ದಾಖಲಿಸಿದೆ.
ಇದರಲ್ಲಿ ನಿಷೇಧಿತ ಸಂಘಟನೆಯಾದ ಲಷ್ಕರ್ ಎ ತೋಯ್ಬಾದ ಸಹ ಸಂಘಟನೆ ದಾವಾತ್ ವಾಲ್ ಇರ್ಷಾದ್ ವಿರುದ್ಧ ಭೂಮಿ ಅಕ್ರಮವಾಗಿ ವಶಪಡಿಸಿ, ಭಯೋತ್ಪಾದನೆ ಚಟುವಟಿಕೆಗೆ ಬಳಸಿದ ಆರೋಪವಿದೆ. ಆದರೆ ಎಲ್ಲೂ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಹೆಸರೇ ಇಲ್ಲ. ಸಂಘಟನೆಯ ಇತರ ಪ್ರಮುಖರ ಹೆಸರೂ ಇಲ್ಲ. ಲಷ್ಕರ್ ಹೆಸರು ಬದಲಾಗಿ ಜಮಾತ್ ಉದ್ ದಾವಾ ಸಂಘಟನೆಯಾಗಿದ್ದು, ಅದರ ಹೆಸರೂ ಎಫ್ಐಆರ್‌ನಲ್ಲಿ ಇಲ್ಲ. ಆದ್ದರಿಂದ ಈ ಪ್ರಕರಣ ಕೋರ್ಟ್‌ನಲ್ಲಿ ಬಿದ್ದು ಹೋಗಬಹುದು ಎಂದು ಹೇಳಲಾಗಿದೆ.
ಕೆಲವೇ ದಿನಗಳಲ್ಲಿ ಎಫ್ಎಟಿಎ ಸಭೆ ನಡೆಸಲಿದ್ದು, ಇದು ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸದಂತೆ ಪಾಕಿಸ್ಥಾನ ನಾಟಕವಾಡುತ್ತಿದೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರಿದ್ದೇ ಆದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ಥಾನಕ್ಕೆ ಯಾವುದೇ ಹೂಡಿಕೆಗಳು ಹರಿದು ಬರಲಾರವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.