ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಅವಘಡ: ಹತ್ತು ಮಂದಿ ಸಾವು
Team Udayavani, Nov 15, 2020, 10:33 AM IST
ರುಮೇನಿಯಾ: ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ರುಮೇನಿಯಾದಲ್ಲಿ ನಡೆದಿದೆ.
ರುಮೇನಿಯಾದ ರಾಜಧಾನಿ ಬುಚರೆಸ್ಟ್ ನಿಂದ 353 ಕಿ,ಮೀ ದೂರದ ಪಿಯಾಟ್ರಾ ನೀಮ್ಟ್ ನಲ್ಲಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಇಂದಿನಿಂದ ತೆರೆಯಲಿದೆ ಶಬರಿಮಲೆ ದೇವಸ್ಥಾನ: ಈ ಬಾರಿ ಭಕ್ತರು ಈ ನಿಯಮಗಳನ್ನು ಪಾಲಿಸಲೇಬೇಕು
ಆರೋಗ್ಯ ಸಚಿವ ನೆಲು ಟಾಟಾರು ಈ ಬಗ್ಗೆ ಹೇಳಿಕೆ ನೀಡಿದ್ದು, ಆಸ್ಪತ್ರೆಯಲ್ಲಿ ಉಳಿದಿರುವ ಸೋಂಕಿತರನ್ನು ಪೂರ್ವ ರೊಮೇನಿಯನ್ ನಗರದ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನೆಯಲ್ಲಿ ದೇಹದ ಶೇ.40ರಷ್ಟು ತೀವ್ರವಾಗಿ ಸುಟ್ಟು ಗಾಯಗೊಂಡಿರುವ ವೈದ್ಯರನ್ನು ರಾಜಧಾನಿ ಬುಚಾರೆಸ್ಟ್ ನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಸರ್ಕಾರ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.