ಬಾಗ್ದಾದ್ ಹಸಿರು ವಲಯಕ್ಕೆ ಅಪ್ಪಳಿಸಿದ 5 ರಾಕೆಟ್: ಹೆಚ್ಚಾದ ಉದ್ವಿಗ್ನತೆ !
Team Udayavani, Jan 27, 2020, 8:20 AM IST
ಬಾಗ್ದಾದ್: ಅಮೇರಿಕಾ ರಾಯಭಾರ ಕಚೇರಿಗಳು ಸೇರಿದಂತೆ ಹಲವು ವಿದೇಶಿ ರಾಯಭಾರ ಕಚೇರಿಗಳಿರುವ ಬಾಗ್ದಾದ್ ನ ಹಸಿರು ವಲಯಕ್ಕೆ 5 ಕತ್ಯುಷಾ ರಾಕೆಟ್ ಗಳು ಬಂದು ಅಪ್ಪಳಿಸಿವೆ ಎಂದು ಇರಾಕ್ ನ ಭದ್ರತಾ ಪಡೆಗಳು ಸ್ಪಷ್ಟಪಡಿಸಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ. ಆದರೇ ಯಾವುದೇ ಸಾವು-ನೋವಿನ ವರದಿಯಾಗಿಲ್ಲ.
ಟೈಗ್ರೀಸ್ ನದಿ ಸಮೀಪ ದೊಡ್ಡದಾದ ಶಬ್ದ ಕೇಳಿಬಂದಿದೆ. ಬಾಗ್ದಾದ್‌ನ ‘ಹಸಿರು ವಲಯ’ ಇರಾಕಿ ರಾಜಧಾನಿಯ ಮಧ್ಯಭಾಗದಲ್ಲಿ ಹೆಚ್ಚು ಭದ್ರತೆಯುಳ್ಳ ಪ್ರದೇಶವಾಗಿದ್ದು, ಅಲ್ಲಿ ಸರ್ಕಾರಿ ಸಂಸ್ಥೆಗಳು ಮತ್ತು ವಿದೇಶಿ ರಾಜತಾಂತ್ರಿಕ ಕಚೇರಿಗಳು ಇವೆ. ಅಮೇರಿಕಾದ ಸೈನ್ಯವನ್ನು ಬಾಗ್ದಾದ್ ನಿಂದ ಹಿಂತೆಗೆದುಕೊಳ್ಳುವಂತೆ ಸಾವಿರಾರು ಜನರು ಪ್ರತಿಭಟನೆ ನಡೆಸಿದ ಎರಡು ದಿನದಲ್ಲಿ ಈ ರಾಕೆಟ್ ಗಳು ಬಂದು ಅಪ್ಪಳಿಸಿವೆ. ಅಮೆರಿಕವನ್ನೇ ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದೆ.
ಈ ತಿಂಗಳ ಆರಂಭದಲ್ಲಿ ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಮೇರಿಕಾ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನಿನ ಜನರಲ್ ಖಾಸೀಂ ಸೊಲೈಮಾನಿ ಅವರನ್ನು ಹತ್ಯೆಗೈಯಲಾಗಿತ್ತು, ಈ ಘಟನೆಯ ನಂತರ ಮಧ್ಯಪ್ರಾಚ್ಯದಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನತೆ ಹೆಚ್ಚುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.