ಪ್ರವಾಹಕ್ಕೆ ಕಂಗಾಲು: ನೇಪಾಲದಲ್ಲಿ 115 ಮಂದಿ ಸಾವು
Team Udayavani, Aug 16, 2017, 8:30 AM IST
ಕಠ್ಮಂಡು: ಕಳೆದೊಂದು ವಾರದಿಂದ ನೇಪಾಲವನ್ನು ಕಾಡುತ್ತಿರುವ ಭಾರೀ ಪ್ರಮಾಣದ ನೆರೆ ಹಾಗೂ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 115ಕ್ಕೇರಿದೆ. ಪ್ರತ್ಯೇಕ ಘಟನೆಗಳಲ್ಲಿ ನಾಪತ್ತೆಯಾದವರ ಪೈಕಿ 40ಕ್ಕೂ ಹೆಚ್ಚು ಮಂದಿಯ ಸುಳಿವು ಇನ್ನೂ ಸಿಕ್ಕಿಲ್ಲ. ಅಲ್ಲದೆ, ಹಿಮಾಲಯದ ತಪ್ಪಲು ಪ್ರದೇಶ ಗಳಲ್ಲಿ ಸುರಿದ ಕುಂಭದ್ರೋಣ ಮಳೆಗೆ ಅಪಾಯಕ್ಕೆ ಸಿಲುಕಿರುವ ಆರು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬ್ರಿಟ್ನಾನಗರ ಜೋಗಬಾನಿ ಗಡಿಯಲ್ಲಿ ಮಂಗಳವಾರ 7 ಮಂದಿ ಶವವನ್ನು ಪ್ರವಾಹದಿಂದ ಹೊರಗೆತ್ತಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಗಳಿವೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿದ್ದಾಗಿ ವರದಿ ಮಾಡಿದೆ.
ಚೀನ ನೆರವು: ನೆರೆ ರಾಷ್ಟ್ರ ಚೀನ ಪ್ರವಾಹ ಪೀಡಿತ ಪ್ರದೇಶಗಳಿಗೆಂದು 6.41 ಕೋಟಿ ರೂ. ಪರಿಹಾರ ನೀಡುತ್ತಿರುವುದಾಗಿ ತಿಳಿಸಿದೆ. ನೇಪಾಲ ಪ್ರತಿನಿಧಿಗಳ ಜತೆ ಚರ್ಚಿಸಲಾಗಿದ್ದು, ಸಹಕಾರ ಬೇಕಿದ್ದಲ್ಲಿ ನೀಡುವುದಾಗಿ ಹೇಳಲಾಗಿದೆ.
ಭಾರತದಿಂದ 30 ಆ್ಯಂಬುಲೆನ್ಸ್ ಗಿಫ್ಟ್
ಪ್ರವಾಹದಿಂದ ತತ್ತರಿಸಿರುವ ನೇಪಾಲದ ಸಹಾಯಕ್ಕೆ ಭಾರತ, ಚೀನ ಮುಂದಾಗಿವೆ. ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಿರುವ ಭಾರತೀಯ ರಾಯಭಾರ ಕಚೇರಿ, ಸಂಕಷ್ಟದಲ್ಲಿರು ವವರ ನೆರವಿಗಾಗಿ 30 ಆ್ಯಂಬುಲೆನ್ಸ್ ಕಳುಹಿಸಿದ್ದಾಗಿ ತಿಳಿಸಿದೆ. ರಾಯಭಾರಿ ಮಂಜೀವ್ ಸಿಂಗ್ ಪುರಿ ಅವರು ಎಲ್ಲ ಆ್ಯಂಬುಲೆನ್ಸ್‌ಗಳನ್ನು ಅಗತ್ಯವಿರುವ ಆಸ್ಪತ್ರೆಗೆಗಳಿಗೆ ನೀಡಿದ್ದಾರೆ. ಅಲ್ಲದೇ, 57.3 ದಶಲಕ್ಷ ಮೌಲ್ಯದ ನೇಪಾಲಿ ರೂ. ಚೆಕ್‌ಗಳನ್ನು ವಿತರಿಸಲಾಗಿದೆ. ಸೂರಿಲ್ಲದ ವರಿಗೆ ಚಾದರ ವಿತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ
South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ
Ceasefire: ಇಸ್ರೇಲ್, ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ?
Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.