ಮೋದಿ – ಕ್ಸಿ ಭೇಟಿಯಿಂದ ವಿಶ್ವಕ್ಕೆ ಸಿಗಲಿದೆ ಹೊಸ ವಿಚಾರ
Team Udayavani, Apr 24, 2018, 10:59 AM IST
ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ, ಕ್ಸಿ ಜಿನ್‌ಪಿಂಗ್ ನಡುವಿನ ಭೇಟಿಯಿಂದ ಭಾರತ ಮತ್ತು ಚೀನ ನಡುವಿನ ಸಂಬಂಧದ ಧನಾತ್ಮಕವಾದ ಹೊಸ ವಿಚಾರ ವಿಶ್ವಕ್ಕೆ ಗೊತ್ತಾಗಲಿದೆ ಎಂದು ಚೀನ ವಿದೇಶಾಂಗ ಇಲಾಖೆ ಹೇಳಿಕೊಂಡಿದೆ.
ಚೀನದ ವುಹಾನ್ ನಗರದಲ್ಲಿ ಎ.27, 28ರಂದು ದೇಶಗಳಲ್ಲಿ ಹೆಚ್ಚುತ್ತಿರುವ ಸ್ವರಕ್ಷಣಾತ್ಮಕ ಕ್ರಮಗಳು, 100 ವರ್ಷಗಳಲ್ಲಿ ವಿಶ್ವದಲ್ಲಿ ಆಗಿರುವ ಬದಲಾವಣೆಗಳ ಬಗ್ಗೆ, ಎರಡೂ ದೇಶಗಳಿಗೆ ಸಮಾನವಾಗಿ ಆತಂಕಕ್ಕೆ ಕಾರಣವಾಗಿರುವ ಜಾಗತಿಕ ವಿದ್ಯಮಾನಗಳ ಕುರಿತು ಪಿಎಂ ಮೋದಿ, ಅಧ್ಯಕ್ಷ ಕ್ಸಿಜಿನ್ ಪಿಂಗ್ ಚರ್ಚಿಸಲಿದ್ದಾರೆ ಎಂದು ಇಲಾಖೆ ವಕ್ತಾರ ಹೇಳಿದ್ದಾರೆ. ಇಬ್ಬರು ನಾಯಕರ ಭೇಟಿಯಲ್ಲಿ ಯಾವುದೇ ರಾಜಕೀಯವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಹಿಂದಿ ಕಲಿಯಬೇಕು: ಭಾರತ ಮತ್ತು ಚೀನದವರು ಹಿಂದಿ ಮತ್ತು ಚೀನೀ ಭಾಷೆ ಕಲಿಯಬೇಕು ಎಂದಿದ್ದಾರೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್. ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚೀನದ 16 ವಿವಿಗಳಲ್ಲಿ 400 ಮಂದಿ ವಿದ್ಯಾರ್ಥಿಗಳು ಹಿಂದಿ ಕಲಿಯುತ್ತಿದ್ದಾರೆ. ‘ದಂಗಲ್’, ‘ಸೀಕ್ರೆಟ್ ಸೂಪರ್‌ಸ್ಟಾರ್’ ಗಳಂಥ ಹಿಂದಿ ಸಿನಿಮಾಗಳು ಚೀನದಲ್ಲಿ ಜನ ಪ್ರಿಯಗೊಂಡಿವೆ. ತಮಿಳು, ಬಂಗಾಲಿ ಭಾಷೆ ಕೂಡ ಇತ್ತೀಚಿನ ದಿನಗಳಲ್ಲಿ ಜನಪ್ರಿಯಗೊಳ್ಳುತ್ತಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.