ಪಾಕ್‌ನಲ್ಲಿ ಪೊಲೀಸ್ ಹುದ್ದೆಗೆ ಹಿಂದೂ ಮಹಿಳೆ
Team Udayavani, Sep 5, 2019, 5:31 AM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಉದ್ಯೋಗ ದೊರಕಿಸಿಕೊಳ್ಳುವುದೇ ಅತ್ಯಂತ ಕಷ್ಟ. ಇಂಥದ್ದರಲ್ಲೇ ಇದೇ ಮೊದಲ ಬಾರಿಗೆ ಪುಷ್ಪಾ ಕೊಹ್ಲಿ ಎಂಬ ಮಹಿಳೆ ಸಿಂಧ್ ಪ್ರಾಂತ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಪೊಲೀಸ್ ಅಧಿಕಾರಿಯಾಗಿ ನೇಮಕವಾಗಿದ್ದಾರೆ. ಈಕೆ ಅಸಿಸ್ಟಂಟ್ ಸಬ್ ಇನ್‌ಸ್ಪೆಕ್ಟರ್ ಆಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಮೆಚ್ಚುಗೆ ಪಡೆಯುತ್ತಿದ್ದಾರೆ.
ಕಳೆದ ಜನವರಿಯಲ್ಲಿ ಹಿಂದು ಸಮುದಾಯಕ್ಕೆ ಸೇರಿದ ಸುಮನ್ ಪವನ್ ಬೊದಾನಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನೇಮಕವಾಗಿದ್ದರು. ಇವರೂ ಕೂಡ ಸಿಂಧ್ ಪ್ರಾಂತ್ಯದವರೇ ಆಗಿರುವುದು ಗಮನಾರ್ಹ ಅಂಶ. ಸಿಂಧ್ ಪ್ರಾಂತ್ಯದಲ್ಲಿ ಹಿಂದುಗಳ ಸಂಖ್ಯೆ ತುಸು ಹೆಚ್ಚಿದ್ದು ಇತರ ಪ್ರದೇಶಗಳೊಂದಿಗೆ ಸಾಂಸ್ಕೃತಿಕ ಹಾಗೂ ಭಾಷಾವಾರು ಪ್ರತ್ಯೇಕತೆಯನ್ನು ಹೊಂದಿದೆ. ಮೂಲಗಳ ಪ್ರಕಾರ ಒಟ್ಟು ಪಾಕಿಸ್ಥಾನದಲ್ಲಿ 90 ಲಕ್ಷ ಹಿಂದುಗಳು ವಾಸಿಸುತ್ತಿದ್ದಾರೆ.
ಸಿಕ್ಖ್ ಯುವತಿ ಪ್ರಕರಣ ಇತ್ಯರ್ಥ
ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಮುಸ್ಲಿಂ ಯುವಕ ಸಿಕ್ಖ್ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಿ ವಿವಾಹವಾದ ಪ್ರಕರಣ “ಇತ್ಯರ್ಥ’ಪಡಿಸಲಾಗಿದೆ. ಈ ಬಗ್ಗೆ ಅಲ್ಲಿನ ರಾಜ್ಯಪಾಲ ಚೌಧರಿ ಮೊಹಮ್ಮದ್ ಸರ್ವರ್ ಮಾಹಿತಿ ನೀಡಿದ್ದಾರೆ. ಎರಡೂ ಕುಟುಂಬಗಳನ್ನು ಕರೆಯಿಸಿ ಮಾತುಕತೆ ನಡೆಸಲಾಗಿದೆ ಎಂದಿದ್ದಾರೆ. 6 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು ಮತ್ತು ಒಬ್ಬನನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.